Breaking News

Mangalore : ‘ಹಕ್ಕಿ ಹಬ್ಬ’ ಪಕ್ಷಿ ಉತ್ಸವ : ಜ.9 ರಿಂದ ಮಂಗಳೂರಿನಲ್ಲಿ ಹಕ್ಕಿಗಳ ಚಿಲಿಪಿಲಿ ಸದ್ದು

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಜನವರಿ 9ರಿಂದ 11ರವರೆಗೆ ಹಕ್ಕಿ ಹಬ್ಬ (ಪಕ್ಷಿ ಉತ್ಸವ) 12ನೇ ಆವೃತ್ತಿ ಮಂಗಳೂರಿನಲ್ಲಿ ನಡೆಯಲಿದೆ.
ಬುಧವಾರದಂದು, ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಅಧ್ಯಕ್ಷೆ ಶಲೆಟ್ ಪಿಂಟೋ, ಅಳಿವಿನ ಅಂಚಿನಲ್ಲಿರುವ ಅನೇಕ ಪಕ್ಷಿ ಜಾತಿಗಳನ್ನು ಒಳಗೊಂಡಂತೆ ರಾಜ್ಯದ ಶ್ರೀಮಂತ ಪಕ್ಷಿ ವೈವಿಧ್ಯತೆ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸುವುದು ಹಬ್ಬದ ಮುಖ್ಯ ಉದ್ದೇಶ ಎಂದು ಹೇಳಿದರು.

Read More

Alcohol : ಹಣ ವಸೂಲಿಗೆ ಇಳಿದ ಮದ್ಯದಂಗಡಿಗಳಿಗೆ ದಂಡ : 12 ಕೋಟಿ ಸಂಗ್ರಹ

ಗ್ರಾಹಕರ ರಕ್ಷಣೆಯೊಂದಿಗೆ ಅಕ್ರಮ ಲಾಭಾಸಕ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಇಲಾಖೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ತಪಾಸಣಾ ಕಾರ್ಯಾಚರಣೆ ನಡೆಸಿದ್ದು, ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮೀರಿ ಮದ್ಯ ಮಾರಾಟ ಮಾಡಿದ ಪ್ರಕರಣಗಳಲ್ಲಿ ಸುಮಾರು ₹12 ಕೋಟಿ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ 736 ಮದ್ಯ ಅಂಗಡಿಗಳ ಪರವಾನಗಿಗಳನ್ನು ಅಮಾನತುಗೊಳಿಸಲಾಗಿದೆ.

Read More

Puttur : ಜ.12-13ರಂದು ವಿವೇಕಾನಂದ ಕಾಲೇಜಿನಲ್ಲಿ ವಿವೇಕ ಜಯಂತಿ, ಶತ ಜಯಘೋಷ ಪಥಸಂಚಲನ

ವಿವೇಕಾನಂದ ವಿದ್ಯಾವರ್ಧಕ ಸಂಘದ ನೆಹರುನಗರದಲ್ಲಿರುವ ಕಾಲೇಜು ಆವರಣದಲ್ಲಿ ಜ.12 ರಂದು ವಿವೇಕಾನಂದ ಜಯಂತಿ ಕಾರ್ಯಕ್ರಮ ಆಯೊಜಿಸಲಾಗಿದ್ದು, ಜ.13 ರಂದು ಶತ ಜಯಘೋಷ ಪಥ ಸಂಚಲನ ನಡೆಯಲಿದೆ.
ವಿವೇಕಾನಂದ ಜಯಂತಿ ಪ್ರಯುಕ್ತ 12 ರಂದು ಬೆಳಗ್ಗೆ 9:39ರಿಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಂಗಳೂರು ದಕ್ಷಿಣ ಕ್ಷೇತ್ರಸ ಸಂಸದ ತೇಜಸ್ವಿ ಸೂರ್ಯ ಅವರು ಆಗಮಿಸಲಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು