ಬೆಳಗಾವಿ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ಗೆ ಬಂಧನ ಭೀತಿ: ಜಾತಿನಿಂದನೆ ಪ್ರಕರಣದಲ್ಲಿ ಅರೆಸ್ಟ್ ವಾರಂಟ್ ಜಾರಿ!
ಬೆಂಗಳೂರು: ಜಾತಿನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನ್ಯಾಯಾಲಯವು ಬಂಧನದ ವಾರಂಟ್ (Arrest Warrant) ಜಾರಿಗೊಳಿಸಿದೆ. ಇದರಿಂದಾಗಿ ಶಾಸಕರಿಗೆ ಕಾನೂನು ಸಂಕಷ್ಟ ಎದುರಾಗಿದೆ. ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಕಠಿಣ ಕ್ರಮ ಕೈಗೊಂಡಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅರೆಸ್ಟ್ ವಾರಂಟ್ ಜಾರಿಗೊಳಿಸಿದ್ದಾರೆ. ಮೇ 7ರಂದು ಶಾಸಕರನ್ನು ಬಂಧಿಸಿ ನ್ಯಾಯಾಲಯಕ್ಕೆ
Read Moreಬೆಳಗಾವಿ: ಸ್ಕಿಪ್ಪಿಂಗ್ ಹಗ್ಗ ತೆಗೆಯಲು ಹೋಗಿ ವಿದ್ಯುತ್ ಅವಘಡಕ್ಕೆ ಬಲಿಯಾದ 9 ವರ್ಷದ ಬಾಲಕಿ!
ಆಟವಾಡುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ವಿದ್ಯುತ್ ತಂತಿ ತಗುಲಿ ಮನೆಯ ಮೇಲಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಸ್ಕಿಪ್ಪಿಂಗ್ ಹಗ್ಗವನ್ನು ಮರಳಿ ಪಡೆಯಲು ಹೋದ ಈಕೆಯ ಪ್ರಯತ್ನ ದುರಂತದಲ್ಲಿ ಅಂತ್ಯಗೊಂಡಿದೆ. ಇಂಗಳಿ ಗ್ರಾಮದ ನಿವಾಸಿ ಸಾನ್ವಿ ಕಾಂಬಳೆ (9) ಮೃತಪಟ್ಟ ದುರ್ದೈವಿ. ಈಕೆ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಳು. ನಿನ್ನೆ ಸಂಜೆ ಶಾಲೆಯಿಂದ ಬಂದ ಸಾನ್ವಿ ಮನೆಯ ಮಾಳಿಗೆಯ ಮೇಲೆ ಆಟವಾಡುತ್ತಿದ್ದಳು. ಈ
Read Moreಮನೆಯಲ್ಲಿ ಸೀರೆ ಬದಲು ನೈಟಿ ಧರಿಸಿದ್ದಕ್ಕೆ ಪತ್ನಿಯನ್ನೇ ಸುಟ್ಟ ಪತಿ; ಬೆಚ್ಚಿಬೀಳಿಸುವ ಘಟನೆ!
ಬೆಳಗಾವಿ ಜಿಲ್ಲೆಯಲ್ಲಿ ಕೇವಲ ನೈಟಿ ಧರಿಸಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಗೆ ಬೆಂಕಿ ಹಚ್ಚಿದ ಭೀಕರ ಘಟನೆ ನಡೆದಿದೆ.
Read Moreಪ್ರೀತಿ ಹೆಸರಲ್ಲಿ ಬ್ಲ್ಯಾಕ್ಮೇಲ್: ಬೆಳಗಾವಿಯಲ್ಲಿ ವಂಚಕನ ಪತಂಗಾಟ!
ಪ್ರೀತಿಯ ನಾಟಕವಾಡಿ ಯುವತಿಯೊಬ್ಬರನ್ನು ನಂಬಿಸಿ, ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ದೋಚಿದ ಗಂಭೀರ ಪ್ರಕರಣವೊಂದು ಬೆಳಗಾವಿಯಲ್ಲಿ ನಡೆದಿದೆ.
Read Moreಅಂಗನವಾಡಿ ಆಹಾರ ಗುಣಮಟ್ಟ ಕುಸಿತ, ಶಾಸಕಾಂಗ ಸಮಿತಿ ವರದಿ ಉಲ್ಲೇಖಿಸಿ ಸಿಎಂಗೆ ಪತ್ರ
ರಾಜ್ಯದ ಅಂಗನವಾಡಿ ಕೇಂದ್ರಗಳಿಗೆ ನೀಡುವ ಆಹಾರ ಕಳಪೆ ಗುಣಮಟ್ಟದ್ದಾಗಿದ್ದು, ಉತ್ತಮ ಗುಣಮಟ್ಟದ ಆಹಾರ ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
Read MoreBelagavi: ಬೈಕನ್ನು ಬೆನ್ನಟ್ಟಿದ ನಾಯಿ, ಸ್ಕಿಡ್ ಆಗಿ ಸವಾರ ಮೃತ್ಯು
ಬೆಳಗಾವಿ: ಬೈಕ್ ಸವಾರರನ್ನು ನಾಯಿಯೊಂದು ಬೆನ್ನಟ್ಟಿಕೊಂಡು ಬಂದಿದ್ದು, ಗಾಬರಿಗೊಂಡ ಸವಾರ ಮನೆ ಗೋಡೆಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read Moreಬೆಳಗಾವಿ: ಬಾಯ್ಲರ್ ಸ್ಫೋಟಗೊಂಡು ಮೂವರು ಸಾವು, ಆರು ಮಂದಿಗೆ ಗಾಯ
ಬೆಳಗಾವಿ ಜಿಲ್ಲೆಯ ಮುರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ವಿಕ್ರಮ್ ಇನಾಮದಾರ್ ಒಡೆತನದ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.
Read More
