ದೆಹಲಿ: ಜಾಗತಿಕ ಇಂಧನ ಬಿಕ್ಕಟ್ಟಿನ ಭೀತಿಯ ಮಧ್ಯೆಯೇ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು (Excise Duty) ಗಣನೀಯವಾಗಿ ಕಡಿತಗೊಳಿಸುವ ಮೂಲಕ ಜನಸಾಮಾನ್ಯರಿಗೆ ದೊಡ್ಡ ಮಟ್ಟದ ನಿರಾಳ ನೀಡಿದೆ. ಡೀಸೆಲ್ ಮೇಲಿದ್ದ 10 ರೂ. ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದ್ದು, ಈಗ ಅದು ಶೂನ್ಯಕ್ಕೆ ಇಳಿದಿದೆ.
ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್ಗೆ 13 ರೂ.ರಿಂದ 3 ರೂ. ಕ್ಕೆ ಇಳಿಸಲಾಗಿದೆ (ಅಂದರೆ ₹10 ರಷ್ಟು ಕಡಿತ).ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧದ ಭೀತಿ ಮತ್ತು ಹಾರ್ಮುಜ್ ಜಲಸಂಧಿಯಲ್ಲಿ ಉಂಟಾದ ದಿಗ್ಬಂಧನದಿಂದಾಗಿ ಜಾಗತಿಕ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್ಗೆ 114 ಡಾಲರ್ ದಾಟಿದ್ದವು. ಈ ಸಮಯದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ತಪ್ಪಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ.

ಇದನ್ನೂ ಓದಿ: ವಿಶ್ವದ ನಂಬರ್ 1 ಲೀಡರ್ ಮೋದಿ: ಜಾಗತಿಕ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿಗೆ ಅಗ್ರಸ್ಥಾನ!
ಈ ನಿರ್ಧಾರದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಸ್ಥಿರವಾಗಲಿವೆ ಅಥವಾ ಇಳಿಕೆಯಾಗುವ ಸಾಧ್ಯತೆಯಿದ್ದು, ಸಾರಿಗೆ ವೆಚ್ಚ ಕಡಿಮೆಯಾಗುವ ಮೂಲಕ ಹಣದುಬ್ಬರ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

