ಕೇಂದ್ರ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ: ತುಟ್ಟಿಭತ್ಯೆ (DA) ಶೇ. 2ರಷ್ಟು ಹೆಚ್ಚಳಕ್ಕೆ ಸಂಪುಟ ಅನುಮೋದನೆ!

ದೆಹಲಿ: ಲಕ್ಷಾಂತರ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ಯುಗಾದಿ ಸಂಭ್ರಮದ ಬೆನ್ನಲ್ಲೇ ಸಿಹಿ ಸುದ್ದಿ ನೀಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆಯನ್ನು (DA) ಶೇ. 2ರಷ್ಟು ಹೆಚ್ಚಿಸಲು ಅಧಿಕೃತವಾಗಿ ಅನುಮೋದನೆ ನೀಡಲಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರಿ ನೌಕರರಿಗೆ ಸಿಗುತ್ತಿರುವ ಶೇ. 58ರಷ್ಟು ತುಟ್ಟಿಭತ್ಯೆಯು ಈಗ ಶೇ. 60ಕ್ಕೆ ಏರಿಕೆಯಾಗಲಿದೆ.

ಈ ಪರಿಷ್ಕೃತ ಭತ್ಯೆಯು 2026ರ ಜನವರಿ 1ರಿಂದಲೇ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಇದರಿಂದಾಗಿ ನೌಕರರಿಗೆ ಕಳೆದ ಮೂರು ತಿಂಗಳ ಬಾಕಿ ಮೊತ್ತವೂ (Arrears) ಲಭ್ಯವಾಗಲಿದೆ. ಕೇವಲ ಸೇವೆಯಲ್ಲಿರುವ ನೌಕರರಿಗೆ ಮಾತ್ರವಲ್ಲದೆ, ಕೇಂದ್ರ ಸರ್ಕಾರದ ಪಿಂಚಣಿದಾರರಿಗೂ (DR) ಈ ಹೆಚ್ಚಳದ ಲಾಭ ದೊರೆಯಲಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರಕ್ಕೆ ಬಿಗ್ ಶಾಕ್: ಲೋಕಸಭೆಯಲ್ಲಿ ಮೂರು ಮಹತ್ವದ ಮಸೂದೆಗಳು ಫೇಲ್! ಎನ್‌ಡಿಎಗೆ ಸಂಖ್ಯಾಬಲದ ಬಿಸಿ

ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಹಣದುಬ್ಬರವನ್ನು ಗಮನದಲ್ಲಿಟ್ಟುಕೊಂಡು ನೌಕರರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಪ್ರಮುಖ ಘೋಷಣೆ ಮಾಡಲಾಯಿತು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು