ಬೆಂಗಳೂರು: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ ಮತ್ತು ಶಾಂತಾ ರಂಗಸ್ವಾಮಿ ಅವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಗೌರವ ಸಲ್ಲಿಸಿದ್ದು, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೂವರ ಹೆಸರಿನಲ್ಲಿ ಪ್ರೇಕ್ಷಕರ ಸ್ಟ್ಯಾಂಡ್ಗಳಿಗೆ ನಾಮಕರಣ ಮಾಡುವ ನಿರ್ಧಾರ ಕೈಗೊಂಡಿದೆ.
ಇದನ್ನೂ ಓದಿ: Sad: ವಿದ್ಯುತ್ ಕಂಬಕ್ಕೆ ಬೈಕ್ ಅಪ್ಪಳಿಸಿ ಸವಾರ ಸ್ಥಳದಲ್ಲೇ ಸಾವು

ಕರ್ನಾಟಕ ಕ್ರಿಕೆಟ್ ನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ ಈ ಮೂವರು ದಿಗ್ಗಜರು ನಂತರ ಭಾರತ ರಾಷ್ಟ್ರೀಯ ತಂಡಕ್ಕೂ ನಾಯಕತ್ವ ನೀಡಿದ್ದು, ಇಂದಿಗೂ ಕ್ರಿಕೆಟ್ ಲೋಕದ ಅತ್ಯಂತ ಗೌರವಾನ್ವಿತ ವ್ಯಕ್ತಿಗಳು ಎನಿಸಿಕೊಂಡಿದ್ದಾರೆ.
ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಭಾರತ ಪರ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರಾಗಿ ಅನಿಲ್ ಕುಂಬ್ಳೆ ಮುಂದುವರಿದಿದ್ದಾರೆ. ಮತ್ತೊಂದೆಡೆ, ಸಚಿನ್ ತೆಂಡೂಲ್ಕರ್ ನಂತರ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಎರಡನೇ ಸ್ಥಾನದಲ್ಲಿದ್ದಾರೆ.
ಕ್ರಿಕೆಟ್ ಕ್ಷೇತ್ರದಲ್ಲಿ ಈ ಇಬ್ಬರು ಮಾಡಿದ ಸಾಧನೆಗೆ ಭಾರತದ ಮಾಜಿ ವೇಗದ ಬೌಲರ್ ಕೆಎಸ್ ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ಸಮ್ಮುಖದಲ್ಲಿ ತೆಗೆದುಕೊಳ್ಳಲಾಯಿತು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

