Breaking News

ಸೋಮವಾರ ಕರಾವಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ: ಉಚ್ಚಿಲ ಮಹಿಳಾ ದಸರಾ ಹಾಗೂ ಮಂಗಳೂರು ದಸರಾ ಉದ್ಘಾಟಿಸಲಿರುವ ಸಿಎಂ

ಮಂಗಳೂರು: ದಸರಾ ನವರಾತ್ರಿ ಮಹೋತ್ಸವದ ಸಂಭ್ರಮದಲ್ಲಿರುವ ಕರಾವಳಿ ಜಿಲ್ಲೆಗಳಾದ ಮಂಗಳೂರು ಹಾಗೂ ಉಡುಪಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ (ಅಕ್ಟೋಬರ್ 12) ಸುದೀರ್ಘ ಪ್ರವಾಸ ಕೈಗೊಳ್ಳಲಿದ್ದಾರೆ ಚೆನ್ನೈನಿಂದ ನೇರವಾಗಿ ಕರಾವಳಿಗೆ ಆಗಮಿಸಲಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು,  ಉಚ್ಚಿಲ ಕ್ಷೇತ್ರದಲ್ಲಿ ನಡೆಯಲಿರುವ ‘ಮಹಿಳಾ ದಸರಾ’ ಹಾಗೂ ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ 2026’ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ಮಧ್ಯಾಹ್ನ ತಮಿಳುನಾಡಿನ ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳು  ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮಂಗಳೂರಿನಿಂದ ಕಾಪುವಿನ ಮಹಾಲಕ್ಷ್ಮೀ ನಗರ, ಉಚ್ಚಿಲಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ ಅಭಿನಂದನಾ ಸಮಾರಂಭ ಹಾಗೂ ‘ಮಹಿಳಾ ದಸರಾ‘ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ನಾಡಹಬ್ಬ ಮೈಸೂರು ದಸರಾದಲ್ಲಿ ಮೊದಲ ಬಾರಿಗೆ ‘ಕಂಬಳ’ ಹಬ್ಬ!: ಮೀಯಾರಿನಲ್ಲಿ 160 ಕೋಣಗಳ ಆಯ್ಕೆ ಪ್ರಕ್ರಿಯೆ

ಉಡುಪಿಯ ಕಾರ್ಯಕ್ರಮ ಮುಗಿಸಿ ಸೋಮವಾರ ಸಂಜೆ ಮಂಗಳೂರಿಗೆ ವಾಪಸಾಗಲಿರುವ ನಾಯಕರು, ಐತಿಹಾಸಿಕ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ವೈಭವೋಪೇತ ‘ಮಂಗಳೂರು ದಸರಾ 2026 – ನವರಾತ್ರಿ ಮಹೋತ್ಸವ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರಾವಳಿಯ ಎರಡೂ ಜಿಲ್ಲೆಗಳ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ, ಸೋಮವಾರ ರಾತ್ರಿಯೇ ಸಿಎಂ ಮಂಗಳೂರಿನಿಂದ ರಾಜಧಾನಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಕರಾವಳಿಯ ಪ್ರಮುಖ ದಸರಾ ಉತ್ಸವಗಳಲ್ಲಿ ಸಿಎಂ ಹಾಗೂ ಡಿಸಿಎಂ ಭಾಗವಹಿಸುತ್ತಿರುವುದರಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಮತ್ತು ಸಿದ್ಧತಾ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ