ವಿಜಯನಗರ: ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಬದಲಾವಣೆ ಹಾಗೂ ಹೈಕಮಾಂಡ್ ಭೇಟಿಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವ ಜಮೀರ್ ಅಹಮ್ಮದ್ ಖಾನ್ ಹಂಪಿಯಲ್ಲಿ ಭಾರೀ ಸಂಚಲನ ಮೂಡಿಸುವ ಹೇಳಿಕೆ ನೀಡಿದ್ದಾರೆ.
‘2028ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಜಮೀರ್ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಫೆ.12 ಭಾರತ್ ಬಂದ್! ಏನಿರುತ್ತೆ? ಏನಿರೋದಿಲ್ಲ??
ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮ್ಮದ್, ಸಿಎಂ ಬದಲಾವಣೆ ವಿಚಾರಕ್ಕೆ ನೇರವಾಗಿಯೇ ಬ್ರೇಕ್ ಹಾಕಿದರು. ‘ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಏನೇ ನಿರ್ಧಾರ ತಗೊಂಡ್ರೂ ನಾವು ಬದ್ಧರಾಗಿರುತ್ತೇವೆ. ಒಂದು ವೇಳೆ ಬೀದಿಯಲ್ಲಿ ಹೋಗೋ ದಾಸಯ್ಯನನ್ನು ತಂದು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಸದ್ಯಕ್ಕೆ 2028ರವರೆಗೆ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ’ ಎಂದು ಹೇಳುವ ಮೂಲಕ ಸಿಎಂ ಬದಲಾವಣೆಯ ಊಹಾಪೋಹಗಳಿಗೆ ತೆರೆ ಎಳೆದರು.

ಸಿಎಂ ಸಿದ್ದರಾಮಯ್ಯ ಅವರನ್ನು ‘ಹೇಡಿ’ ಎಂದು ಕರೆದಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಜಮೀರ್ ತೀವ್ರವಾಗಿ ಕಿಡಿಕಾರಿದರು. ಜನಾರ್ದನ ರೆಡ್ಡಿ ಯಾವ ಕಡೆ ಯಾವಾಗ ವಾಲುತ್ತಾರೋ ಗೊತ್ತಿಲ್ಲ.
ಅವರು ಸಮಯ ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುತ್ತಾರೆ. ಅವರಿಗೆ ಯಾವುದೇ ರಾಜಕೀಯ ಬದ್ಧತೆ ಇಲ್ಲ. ಅವರು ರಾಜಕಾರಣಿಯಲ್ಲ, ಕೇವಲ ಒಬ್ಬ ಉದ್ಯಮಿ. ಅವರ ಮಾತುಗಳಿಗೆ ನಾವು ಹೆಚ್ಚು ಮಹತ್ವ ನೀಡೋದಿಲ್ಲ’ ಎಂದು ಲೇವಡಿ ಮಾಡಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

