ಮಂಗಳೂರು: ತುಳುನಾಡಿನಲ್ಲಿ ಪ್ರಚಲಿತದಲ್ಲಿರುವ ತುಳು ಭಾಷೆ ಅನಾದಿ ಕಾಲದಿಂದಲೂ ಬಳಕೆಯಿಂದ ಇದೆ. ಇದಕ್ಕೆ ತನ್ನದೇ ಆದ ಲಿಪಿ ಕೂಡ ಇತ್ತು.
13ನೇ ಶತಮಾನದಿಂದಲೇ ಬಳಕೆಯಲ್ಲಿದ್ದು, ತಾಡೋಲೆಗಳ ಮೇಲೆ (ತಾಳೆಗರಿ) ಸಂಸ್ಕೃತ ಮತ್ತು ತುಳು ಸಾಹಿತ್ಯವನ್ನು ಬರೆಯಲು ಹೆಚ್ಚಾಗಿ ಬಳಸಲಾಗುತ್ತಿತ್ತು. ಇದು, 19ನೇ ಶತಮಾನದ ನಂತರ ಕನ್ನಡ ಲಿಪಿಯ ಅಳವಡಿಕೆಯಿಂದಾಗಿ ತುಳು ಲಿಪಿ ಬಳಕೆಯಿಂದ ಅಂಚಿಗೆ ಸರಿಯಿತು.

ಇದನ್ನೂ ಓದಿ: ಮೆಟ್ರಿಕ್ ಮೇಳ: ಸಜಂಕಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮಳಿಗೆ ತೆರೆದು ವ್ಯಾಪಾರ ನಡೆಸಿದ ವಿದ್ಯಾರ್ಥಿಗಳು
ತುಳುವನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಬೇಡಿಕೆಗಳು ಕೇಳಿ ಬರುತ್ತಲೇ ಇದೆ. ಸರಕಾರ ಕೂಡ ಪೂರಕವಾಗಿ ಸ್ಪಂದನೆ ನೀಡುತ್ತಿದೆ.
ಹೀಗಿರುವಾಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡುವಾಗ ತುಳುಗೆ ಲಿಪಿ ಇಲ್ಲ. ಕನ್ನಡವನ್ನೇ ಬಳಸಿಕೊಳ್ಳುತ್ತಿದೆ ಎಂದು ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಬ್ಯಾರಿಸ್ ಸೆಂಟ್ರಲ್ ಕಮಿಟಿ, ಬೆಂಗಳೂರು ಇವರ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬೃಹತ್ “ಬ್ಯಾರಿ ಕೂಟ -2026” ಅನ್ನು ಉದ್ಘಾಟಿಸಿ, ಮಾತನಾಡಿದ ಅವರು ‘ಬ್ಯಾರಿಗಳನ್ನು ಯಾರೇ ವಿಭಜಿಸಲು ಪ್ರಯತ್ನಿಸಿದರೂ ತಮ್ಮ ಅಸ್ಮಿತೆಯನ್ನು, ಒಗ್ಗಟ್ಟನ್ನು ಉಳಿಸಿಕೊಂಡು ಹೋಗಬೇಕು. ತುಳು ಮತ್ತು ಬ್ಯಾರಿ ಭಾಷೆಗೆ ಲಿಪಿ ಇಲ್ಲದ್ದರಿಂದ ಕನ್ನಡದಲ್ಲಿಯೇ ನಿಮ್ಮತನವನ್ನು ಉಳಿಸಿಕೊಂಡಿರುವುದು ಪ್ರಶಂಸನೀಯ.
ದಕ್ಷಿಣ ಕನ್ನಡ ಜಿಲ್ಲೆಯ ಬ್ಯಾರಿಗಳು ದೇಶ, ವಿದೇಶದ ಅನೇಕ ಭಾಗಗಳಲ್ಲಿ ಕೆಲಸ ಮಾಡುವವರಾದರೂ ಬ್ಯಾರಿ ಅಸ್ಮಿತೆಯನ್ನು ಬಿಟ್ಟುಕೊಟ್ಟಿಲ್ಲ. ಬ್ಯಾರಿಗಳು ಜಾತ್ಯತೀತರು. ಜಾತಿ ವ್ಯಾಮೋಹವಾಗಲಿ, ಧರ್ಮದ ವ್ಯಾಮೋಹವಾಗಲಿ ಇಲ್ಲ. ಮೂಲತಃ ವ್ಯಾಪಾರಿಗಳಾದ ಬ್ಯಾರಿಗಳು ಎಲ್ಲಾ ಸಮುದಾಯಗಳೊಂದಿಗೆ ಹೊಂದಿಕೊಂಡು ಅವರ ಸಂಸ್ಕೃತಿ, ಉದ್ಯೋಗದೊಂದಿಗೆ ತಮ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುತ್ತಿರುವುದು ದೊಡ್ಡ ವಿಚಾರ’. ಎಂದಿದ್ದಾರೆ.
ತುಳು ಲಿಪಿಯ ಬಳಕೆಗೆ ಉತ್ತೇಜನ ನೀಡುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಈ ಹೇಳಿಕೆ ತುಳುನಾಡಿನ ಜನತೆಗೆ ಬೇಸರ ತರಿಸಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

