ಕರಾವಳಿ ಜನತೆಗೆ ಕೂಲ್ ನ್ಯೂಸ್: ನಾಳೆಯಿಂದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭರ್ಜರಿ ಮಳೆ ಸಾಧ್ಯತೆ!

ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬಂದಿದ್ದ ಅತಿಯಾದ ಸೆಖೆ ಮತ್ತು ಉಸಿರುಕಟ್ಟುವ ವಾತಾವರಣಕ್ಕೆ ಶೀಘ್ರವೇ ಬ್ರೇಕ್ ಬೀಳಲಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮೇ 6ರ ಬುಧವಾರದಿಂದ ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ಬುಧವಾರದಿಂದ ವಾರಾಂತ್ಯದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.ಮಳೆಯ ಜೊತೆಗೆ ಬಲವಾದ ಗಾಳಿ ಮತ್ತು ಮಿಂಚಿನ ಚಟುವಟಿಕೆಗಳು ಹೆಚ್ಚಿರಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇದನ್ನೂ ಓದಿ: ಕರಾವಳಿಯಲ್ಲಿ ಹೀಟ್ ಅಲರ್ಟ್: ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಚರ್ಮದ ಸಮಸ್ಯೆ; ಆಸ್ಪತ್ರೆಗಳಲ್ಲಿ ವಿಶೇಷ ಬೆಡ್ ಮೀಸಲು!

ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸೋಮವಾರ ಕರಾವಳಿಯಲ್ಲಿ ತಾಪಮಾನ 34°C ದಾಖಲಾಗಿದ್ದು, ಮೈಸೂರು ಮತ್ತು ಚಾಮರಾಜನಗರದ ಕೆಲವು ಭಾಗಗಳಲ್ಲಿ ಈಗಾಗಲೇ ಲಘು ಮಳೆಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು