ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಏರಿಕೆ: ಇಂದಿನಿಂದ 195.50 ರೂ. ತುಟ್ಟಿ!

ದೆಹಲಿ: ಹೊಸ ಹಣಕಾಸು ವರ್ಷದ ಮೊದಲ ದಿನವೇ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಜಾಗತಿಕ ತೈಲ ಮಾರುಕಟ್ಟೆಯಲ್ಲಿನ ಏರಿಳಿತದ ಪರಿಣಾಮವಾಗಿ, ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ (Commercial LPG) ಸಿಲಿಂಡರ್ ಬೆಲೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿವೆ.

19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ ₹195.50 ಹೆಚ್ಚಳ ಮಾಡಲಾಗಿದೆ. ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಮೇಲೆ ಈ ಬೆಲೆ ಏರಿಕೆ ನೇರ ಪರಿಣಾಮ ಬೀರಲಿದ್ದು, ಹೊರಗಿನ ತಿಂಡಿ-ತಿನಿಸುಗಳ ಬೆಲೆ ಕೂಡ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ

ಸದ್ಯಕ್ಕೆ 14.2 ಕೆಜಿ ತೂಕದ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ, ಇದು ಗ್ರಾಹಕರಿಗೆ ಸಲ್ಪ ಮಟ್ಟದ ಸಮಾಧಾನ ತಂದಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು