ನಟಿ ಸುಮನ್ ರಂಗನಾಥ್ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು: ‘ತದ್ವಿರುದ್ಧ’ ಚಿತ್ರತಂಡದಿಂದ ಗಂಭೀರ ಆರೋಪ

ಬೆಂಗಳೂರು: ಬಹುಭಾಷಾ ನಟಿ ಸುಮನ್ ರಂಗನಾಥ್ (Suman Ranganath) ವಿರುದ್ಧ ‘ತದ್ವಿರುದ್ಧ’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಚಾರ್ಮಿಯನ್ ಮೋಷನ್ ಪಿಕ್ಚರ್ಸ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಅಧಿಕೃತವಾಗಿ ದೂರು ನೀಡಿದೆ. ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದರೂ, ನಟಿ ಪ್ರಚಾರ ಕಾರ್ಯಕ್ರಮಗಳಿಗೆ (Promotions) ಕನಿಷ್ಠ ಸಹಕಾರ ನೀಡುತ್ತಿಲ್ಲ ಎಂದು ಚಿತ್ರತಂಡ ಆಕ್ರೋಶ ಹೊರಹಾಕಿದೆ.

ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಅವರಿಗೆ ನೀಡಬೇಕಾಗಿದ್ದ ಪೂರ್ಣ ಸಂಭಾವನೆಯನ್ನು (Remuneration) ಈಗಾಗಲೇ ಪಾವತಿಸಲಾಗಿದ್ದರೂ, ಕಳೆದ ಕೆಲವು ತಿಂಗಳುಗಳಿಂದ ಅವರು ಚಿತ್ರತಂಡಕ್ಕೆ ಸಿಗದೆ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕರು ಕಟುವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಟಾಕ್ಸಿಕ್ಸಿ ನಿಮಾದ ಮನಮೋಹಕ ಹಾಡಿಗೆ ಜೀವ ತುಂಬಿದ ಕರಾವಳಿ ಕಂಪು

ವಾಣಿಜ್ಯ ಮಂಡಳಿಗೆ ನೀಡಿರುವ ದೂರಿನ ಪತ್ರದಲ್ಲಿ ಚಿತ್ರತಂಡ ಹಲವು ಪ್ರಮುಖ ವಿಷಯಗಳನ್ನು ಸ್ಪಷ್ಟಪಡಿಸಿದೆ.2023ರ ಏಪ್ರಿಲ್ 7 ರಂದು ಮಾಡಿಕೊಳ್ಳಲಾದ ಒಪ್ಪಂದದ ಪ್ರಕಾರ, ಸುಮನ್ ರಂಗನಾಥ್ ಅವರು ನಟನೆ ಮತ್ತು ಡಬ್ಬಿಂಗ್ ಜೊತೆಗೆ ಚಿತ್ರದ ಪ್ರಚಾರ ಕಾರ್ಯಗಳಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕಾಗಿತ್ತು. ಕಳೆದ 30 ದಿನಗಳಿಂದ ನಟಿ ಹಾಗೂ ಅವರ ಮ್ಯಾನೇಜರ್ ಶಿವು ಅವರನ್ನು ಸಂಪರ್ಕಿಸಲು ಚಿತ್ರತಂಡ ನಿರಂತರವಾಗಿ ಫೋನ್ ಕರೆ ಮತ್ತು ವಾಟ್ಸಾಪ್ ಸಂದೇಶಗಳ ಮೂಲಕ ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Leave a Reply

Your email address will not be published. Required fields are marked *