ಸಚಿವ ಹೆಚ್.ಸಿ. ಮಹದೇವಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು!: ಸಮಾಜ ಕಲ್ಯಾಣ ಇಲಾಖೆ ಟೆಂಡರ್‌ನಲ್ಲಿ ಭ್ರಷ್ಟಾಚಾರ ಆರೋಪ; ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಆಗ್ರಹ!

ಬೆಂಗಳೂರು: ರಾಜ್ಯ ಸರ್ಕಾರದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ. ಮಹದೇವಪ್ಪ (H.C. Mahadevappa) ಅವರ ವಿರುದ್ಧ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗದ ಗಂಭೀರ ಆರೋಪ ಕೇಳಿಬಂದಿದೆ. ಇಲಾಖೆಯ ವಿವಿಧ ಟೆಂಡರ್‌ಗಳಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿಯೊಬ್ಬರು ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ದೂರು ನೀಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಬೆಂಗಳೂರಿನ ದೂರುದಾರರು ರಾಜ್ಯಪಾಲರಿಗೆ ಸಲ್ಲಿಸಿರುವ ಮನವಿಯಲ್ಲಿ ಸಚಿವರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಪಟ್ಟಿ ಮಾಡಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಯೋಜನೆಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ, ತಮಗೆ ಬೇಕಾದವರಿಗೆ ಅನುಕೂಲ ಮಾಡಿಕೊಡುವ ಮೂಲಕ ಸಚಿವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಹಾಗೂ ಸಾರ್ವಜನಿಕ ನಿಧಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ತನಿಖೆ ನಡೆಸಿ ಈ ನಷ್ಟದ ಮೊತ್ತವನ್ನು ಸಚಿವರಿಂದಲೇ ವಸೂಲಿ ಮಾಡಬೇಕು ಎಂದು ಒತ್ತಾಯಿಸಲಾಗಿದೆ.

ಇದನ್ನೂ ಓದಿ:ಡಿಕೆಶಿ ಕುಮಾರ್​​​​ ಸಿಎಂ ಆಗುತ್ತಿದ್ದಂತೆ ಮಹತ್ವದ ದಾಖಲೆ: ದೇಶದ ಕುಬೇರ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಕರ್ನಾಟಕ ಸಿಎಂ!

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಸಾಂವಿಧಾನಿಕ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ, ಆರೋಪಗಳು ಸಾಬೀತಾದಲ್ಲಿ ಹೆಚ್.ಸಿ. ಮಹದೇವಪ್ಪ ಅವರನ್ನು ಶಾಸಕ (ವಿಧಾನಸಭಾ ಸದಸ್ಯತ್ವ) ಸ್ಥಾನದಿಂದ ತಕ್ಷಣವೇ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಪ್ರಮುಖವಾಗಿ ಆಗ್ರಹಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಹಲವು ಹಗರಣಗಳ ಕುರಿತು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಜಿದ್ದಾಜಿದ್ದಿ ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ಸಚಿವರೊಬ್ಬರ ವಿರುದ್ಧ ನೇರವಾಗಿ ರಾಜಭವನಕ್ಕೆ ದೂರು ಸಲ್ಲಿಕೆಯಾಗಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ. ಈ ದೂರಿನ ಆಧಾರದ ಮೇಲೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಂದ ಮಾಹಿತಿ ಕೋರುತ್ತಾರಾ ಅಥವಾ ತನಿಖೆಗೆ ಆದೇಶಿಸುತ್ತಾರಾ ಎಂಬುದನ್ನು ಕಾದುನೋಡಬೇಕಿದೆ. ಈ ಕುರಿತು ಸಚಿವ ಮಹದೇವಪ್ಪ ಅವರ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು