ಮಂಗಳೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಮತ್ತು ಪೆಟ್ರೋಲ್-ಡೀಸೆಲ್ ದರ ಏರಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಕದ್ರಿ ಸರ್ಕಲ್ ಬಳಿ ಇಂದು ಭಾರಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮನಾಥ್ ರೈ ಸೇರಿದಂತೆ ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಭಾಗವಹಿಸಿ, ಕೇಂದ್ರ ಸರ್ಕಾರದ ವಿಫಲ ನೀತಿಗಳ ವಿರುದ್ಧ ಕಿಡಿಕಾರಿದರು.
ಇದನ್ನೂ ಓದಿ:ಈಡೇರದ ಬೇಡಿಕೆಗಳು; ಮೇ ೨೦ ರಿಂದ ಕರ್ನಾಟಕ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಪ್ರತಿಭಟನಾಕಾರರನ್ನು ಬಲವಂತವಾಗಿ ವಶಕ್ಕೆ ಪಡೆದರು. ರಸ್ತೆಯಲ್ಲಿ ಧರಣಿ ಕುಳಿತಿದ್ದವರನ್ನು ಎಳೆದಾಡಿ ಬಸ್‌ನಲ್ಲಿ ತುಂಬಿಸಿ ಕರೆದೊಯ್ದ ಘಟನೆ ನಡೆಯಿತು.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


