ಉಡುಪಿ: ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ಮೂಲದ ಆರಿಫ್ (37) ಮತ್ತು ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು.
ಥೀಮ್ ಪಾರ್ಕ್‌ನ ಕಟ್ಟಡದ ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆ ಕಳವು ಮಾಡಿದ ವಿಚಾರ ಬೆಳಕಿಗೆ ಬಂದಿತ್ತು. ಪ್ರಕರಣದ ತನಿಖೆ ಕೈಗೊಂಡ ಕಾರ್ಕಳ ಪೊಲೀಸರು ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದರು. ಈ ತಂಡವು ಉಡುಪಿ ಮಾತ್ರವಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದರು.

ಇದನ್ನೂ ಓದಿ: ನ್ಯೂ ಇಂಡಿಯಾ ಲಕ್ಕಿ ಸ್ಕೀಂ ವಂಚನೆ ಪ್ರಕರಣ: ಮಂಗಳೂರಿನಲ್ಲಿ ಪ್ರತಿಭಟನೆ
ಸದ್ಯ, ಆರೋಪಿಗಳಿಂದ 45 ಸಾವಿರ ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ ವಶಕ್ಕೆ ಪಡೆಯಲಾಗಿದ್ದು, ಇದರ ಜೊತೆಗೆ ಕೃತ್ಯಕ್ಕೆ ಬಳಸಿದ್ದ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

