ಚಿಕ್ಕಮಗಳೂರು: ವಿಧಾನಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರ ಆಪ್ತರೂ ಆಗಿರುವ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಖಾಸಗಿ ಹೋಂ ಸ್ಟೇನಲ್ಲಿ ವಿಧವೆ ಜೊತೆ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾದ ಘಟನೆ ನಡೆದಿದೆ.
ಆನಂದ್ ಅವರು ಚಿಕ್ಕಮಗಳೂರು ತಾಲೂಕಿನ ಮತ್ತಾವರ ಗ್ರಾಮದ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿರುವ ವಿಚಾರ ತಿಳಿದ ಹತ್ತಕ್ಕೂ ಹೆಚ್ಚು ಮಂದಿ ಇದ್ದ ತಂಡವೊಂದು ಚಿಕ್ಕಮಗಳೂರು-ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂ ಸ್ಟೇ ಮೇಲೆ ದಾಳಿ ನಡೆಸಿ ಪ್ರತಿ ಕೊಠಡಿಗಳನ್ನು ಪರಿಶೀಲಿಸಿದೆ. ಈ ವೇಳೆ ಆನಂದ್ ಮಹಿಳೆಯ ಜೊತೆ ಪತ್ತೆಯಾಗಿದ್ದು, ಆಕ್ರೋಶಗೊಂಡ ಗುಂಪು ಆನಂದ್ ಮೇಲೆ ಹಲ್ಲೆ ನಡೆಸಿದೆ.

ಇದನ್ನೂ ಓದಿ: ಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಗುಡ್ ನ್ಯೂಸ್
ಆನಂದ್ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಲ್ಲೆ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಘಟನೆ ಸಂಬಂಧ ಯಾರು ದೂರು ನೀಡಿಲ್ಲ. ಹೀಗಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಸದ್ಯ ಪೊಲಿಸರು ಎರಡು ಕಡೆಯವರನ್ನು ಸಮಾಧಾನಪಡಿಸಿ ಕಳುಹಿಸಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

