Daily Horoscope: ಇಂದು ಯಾವ ರಾಶಿಯವರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ ಅಗತ್ಯ?

ಇಂದು ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣದ ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಸಪ್ತಮಿ ತಿಥಿ. ಇಂದಿನ ಗ್ರಹಗತಿಗಳ ಆಧಾರದ ಮೇಲೆ ನಿಮ್ಮ ರಾಶಿ ಭವಿಷ್ಯ ಹೇಗಿರಲಿದೆ ಎಂಬುದನ್ನು ತಿಳಿಯಿರಿ.

ಮೇಷ (Aries): ಇಂದು ನಿಮಗೆ ಹೊಸ ಜವಾಬ್ದಾರಿಗಳು ಹುಡುಕಿಕೊಂಡು ಬರಲಿವೆ. ಆರ್ಥಿಕವಾಗಿ ಲಾಭದಾಯಕ ದಿನವಾಗಿದ್ದರೂ, ಅನಗತ್ಯ ಖರ್ಚುಗಳ ಮೇಲೆ ನಿಗಾ ಇರಲಿ.

Advertisement

ವೃಷಭ (Taurus): ಕುಟುಂಬದಲ್ಲಿ ನೆಮ್ಮದಿ ಇರಲಿದೆ. ಸ್ಥಿರಾಸ್ತಿ ಖರೀದಿ ಅಥವಾ ಮಾರಾಟ ಪ್ರಕ್ರಿಯೆಗಳಿಗೆ ಇಂದು ಶುಭ ದಿನ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ಮಿಥುನ (Gemini): ವ್ಯಾಪಾರದಲ್ಲಿ ಲಾಭದ ನಿರೀಕ್ಷೆ ಮಾಡಬಹುದು. ದೂರದ ಪ್ರಯಾಣದಿಂದ ಲಾಭವಿದೆ. ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು, ತಾಳ್ಮೆಯಿಂದಿರಿ.

ಕಟಕ (Cancer): ಉದ್ಯೋಗಿಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಹಳೆಯ ಸಾಲಗಳಿಂದ ಮುಕ್ತಿ ಪಡೆಯುವ ಸಾಧ್ಯತೆ ಇದೆ. ಸಂಜೆ ಶುಭ ಸುದ್ಧಿ ಕೇಳುವಿರಿ.

ಸಿಂಹ (Leo): ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ಹೆಚ್ಚಿನ ಆಸಕ್ತಿ ಮೂಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ.

ಕನ್ಯಾ (Virgo): ಕೆಲಸದ ಒತ್ತಡ ಹೆಚ್ಚಾಗಬಹುದು. ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ. ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಧ್ಯಾನ ಮತ್ತು ಯೋಗಕ್ಕೆ ಸಮಯ ಮೀಸಲಿಡಿ.

ತುಲಾ (Libra): ಮಿತ್ರರ ಸಹಾಯದಿಂದ ನೆನೆಗುದಿಗೆ ಬಿದ್ದ ಕೆಲಸಗಳು ಪೂರ್ಣಗೊಳ್ಳಲಿವೆ. ಪ್ರೇಮಿಗಳಿಗೆ ಇಂದು ಸುವರ್ಣಾವಕಾಶ ದೊರೆಯಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

ವೃಶ್ಚಿಕ (Scorpio): ಕೋಪದ ಮೇಲೆ ನಿಯಂತ್ರಣವಿರಲಿ. ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಿ. ನ್ಯಾಯಾಲಯದ ಕೆಲಸಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.

ಧನು (Sagittarius): ಉದ್ಯೋಗ ಬದಲಾವಣೆಗೆ ಇದು ಸಕಾಲ. ಮಕ್ಕಳಿಂದ ಸಂತೋಷದ ವಾರ್ತೆ ಕೇಳುವಿರಿ. ಹೊಸ ಹೂಡಿಕೆಗಳಿಗೆ ತಜ್ಞರ ಸಲಹೆ ಪಡೆಯಿರಿ.

ಮಕರ (Capricorn): ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಮನೆಯಲ್ಲಿ ಮಂಗಳ ಕಾರ್ಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಕುಂಭ (Aquarius): ಆಧ್ಯಾತ್ಮದ ಕಡೆಗೆ ಒಲವು ಹೆಚ್ಚಾಗಲಿದೆ. ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ಅನಿರೀಕ್ಷಿತ ಧನ ಲಾಭವಾಗುವ ಯೋಗವಿದೆ.

ಮೀನ (Pisces): ಸೃಜನಾತ್ಮಕ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಮಾನಸಿಕ ನೆಮ್ಮದಿಗಾಗಿ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವಿರಿ. ಹಿರಿಯರ ಆಶೀರ್ವಾದ ಸದಾ ನಿಮ್ಮ ಮೇಲಿರಲಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು