ಮಂಗಳೂರು: ನಿರುದ್ಯೋಗಿ ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ನವೆಂಬರ್ 30ರಂದು ದಕ್ಷಿಣ ಕನ್ನಡ ವಿಭಾಗೀಯ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮಂಗಳೂರಿನ ಸಂತ ಅಲೋಶಿಯಸ್ (ಡೀಮ್ಡ್ ಯೂನಿವರ್ಸಿಟಿ) ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಅಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಉದ್ಯೋಗ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಪುತ್ತೂರಿನ ಬಿಜೆಪಿಯಲ್ಲಿ ಅರುಣ್ ಕುಮಾರ್ ಪುತ್ತಿಲರಿಗೆ ಯಾಕಿಲ್ಲ ಮನ್ನಣೆ? ರಾಜಕೀಯದ ಒಳಸುಳಿ ಏನು?
ಉದ್ಯೋಗದ ನಿರೀಕ್ಷೆಯಲ್ಲಿರುವ ಆಸಕ್ತ ಯುವಕ-ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ನೋಂದಣಿಗಾಗಿ yuvaudyogasethu.karnataka.gov.in/services/events ವೆಬ್ಸೈಟ್ಗೆ ಭೇಟಿ ನೀಡಬೇಕು.

ಹೆಚ್ಚಿನ ಮಾಹಿತಿಗಾಗಿ 9606494308 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ


