ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಆಗಸ್ಟ್ 4) ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ವಿವಿಧ ತಾಲೂಕುಗಳ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಬಂಟ್ವಾಳ ಹಾಗೂ ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ (ಹೈಸ್ಕೂಲ್) ಮಾತ್ರ ರಜೆ ಘೋಷಿಸಲಾಗಿದೆ. ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ಹಿಡಿದು ಪದವಿ ಪೂರ್ವ (ಪಿಯುಸಿ) ಕಾಲೇಜುಗಳವರೆಗೂ ರಜೆ ನೀಡಲಾಗಿದೆ.
ಇದನ್ನೂ ಓದಿ: NEET UG 2026: ಕಲ್ಲಡ್ಕ ಶ್ರೀರಾಮ ಪ.ಪೂ. ವಿದ್ಯಾಲಯದ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅದ್ವಿತೀಯ ಸಾಧನೆ
ಭಾರೀ ಮಳೆಯ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪೋಷಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚಿಸಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

