ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹಾಗೂ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮಹತ್ವದ ಆದೇಶ ಹೊರಡಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಜುಲೈ 8ರ ಬುಧವಾರದಂದು ಜಿಲ್ಲೆಯಾದ್ಯಂತ ಈ ಕೆಳಗಿನ ಶಿಕ್ಷಣ ಸಂಸ್ಥೆಗಳಿಗೆ ಕಡ್ಡಾಯ ರಜೆ ಘೋಷಿಸಿದೆ.
ಎಲ್ಲಾ ಅಂಗನವಾಡಿ ಕೇಂದ್ರಗಳು.ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು. ವಸತಿ ಶಾಲೆಗಳು ಮತ್ತು ಪದವಿ ಪೂರ್ವ (ಪಿಯುಸಿ – 12ನೇ ತರಗತಿ ವರೆಗೆ) ಕಾಲೇಜುಗಳು. ಜಿಲ್ಲಾಡಳಿತದ ಈ ರಜೆ ಆದೇಶವನ್ನು ಉಲ್ಲಂಘಿಸಿ ಯಾವುದೇ ಶಿಕ್ಷಣ ಸಂಸ್ಥೆಗಳನ್ನು ನಡೆಸಿದರೆ, ಅಂತಹ ಸಂಸ್ಥೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51(b) ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತವು ಕಡ್ಡಾಯವಾಗಿ ಎಚ್ಚರಿಸಿದೆ.

ಇದನ್ನೂ ಓದಿ: ‘ಗಡಾಯಿಕಲ್ಲು’ ಚಾರಣಕ್ಕೆ ತಾತ್ಕಾಲಿಕ ನಿಷೇಧ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ, ಗುಡ್ಡ ಕುಸಿತ ಆಗುವ ಸಾಧ್ಯತೆ
ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ರೆಡ್ ಅಲರ್ಟ್ ಮುನ್ಸೂಚನೆ ಬೆನ್ನಲ್ಲೇ ಈ ಕಠಿಣ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

