Breaking News

“ನಿಮ್ಮ ಮಗಳನ್ನು ಮದುವೆಯಾಗಿ ಮತಾಂತರ ಮಾಡುತ್ತೇನೆ”: ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕಿದ ಮುಸ್ಲಿಂ ವ್ಯಕ್ತಿ

ಬಿಹಾರದ ದರ್ಬಂಗಾ (Darbhanga) ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಕುಟುಂಬವೊಂದಕ್ಕೆ ಬೆದರಿಕೆ ಹಾಕಿರುವ ಪೋಸ್ಟ್​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗುತ್ತಿದೆ. ಮೊಹಮ್ಮದ್ ಸಿತಾರೆ ಎಂಬ ವ್ಯಕ್ತಿಯು ಹಿಂದೂ ಕುಟುಂಬವೊಂದಕ್ಕೆ, “ನಿಮ್ಮ ಮಗಳನ್ನು ಮದುವೆಯಾಗಿ ಮತಾಂತರ ಮಾಡುತ್ತೇನೆ. ಇಲ್ಲಿ ಸಾವಿರ ಮುಸ್ಲಿಂ ಕುಟುಂಬಗಳಿವೆ, ನೀವು ಕೇವಲ ಐದು ಕುಟುಂಬಗಳಿದ್ದೀರಿ. ನೀವು ಏನೂ ಮಾಡಲು ಸಾಧ್ಯವಿಲ್ಲ” ಎಂದು ಬೆದರಿಕೆ ಹಾಕಿದ್ದಾನೆ.

ಈ ವಿಷಯವು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾದ ಹಿನ್ನೆಲೆಯಲ್ಲಿ, ಅನೇಕರು ಬಿಹಾರ ಪೊಲೀಸರು ಮತ್ತು ದರ್ಬಂಗಾ ಪೊಲೀಸರನ್ನು ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯವು ಭಾರಿ ವಿವಾದ ಸೃಷ್ಟಿಸಿದ ತಕ್ಷಣ, ದರ್ಬಂಗಾ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

Advertisement

ಇದನ್ನೂ ಓದಿ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್​​​ಪಿ ಪಕ್ಷ ಭರ್ಜರಿ ಜಯ: ಪ್ರಧಾನಿ ಮೋದಿ ಶುಭಾಶಯ

ವಿಡಿಯೋ ಇಲ್ಲಿದೆ ನೋಡಿ:

ಈ ಬೆದರಿಕೆ ಪ್ರಕರಣವು ದರ್ಬಂಗಾದ ಭಲ್ಪಟ್ಟಿ ಒಪಿ ಪೊಲೀಸ್ ಠಾಣಾ ವ್ಯಾಪ್ತಿಯ ಮುರಿಯಾ ಗ್ರಾಮದಲ್ಲಿ ನಡೆದಿದೆ. ಹಿಂದೂ ಕುಟುಂಬಕ್ಕೆ ಬೆದರಿಕೆ ಹಾಕುತ್ತಿರುವ ವಿಡಿಯೋ ಮತ್ತು ದೂರು ನಮ್ಮ ಗಮನಕ್ಕೆ ಬಂದಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ. ಸಂತ್ರಸ್ತ ಕುಟುಂಬಕ್ಕೆ ಭದ್ರತೆ ನೀಡಲಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು” ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದೀಗ ಈ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು