ಶ್ರೀಕ್ಷೇತ್ರ ಧರ್ಮಸ್ಥಳ, ಹೆಗ್ಗಡೆಯವರ ವಿರುದ್ಧ ಅವಹೇಳನಕಾರಿ ಹೇಳಿಕೆ: ಜೂನ್ 30ರ ಒಳಗಾಗಿ ವಿಠ್ಠಲ್ ಗೌಡನನ್ನು ಕೋರ್ಟ್‌ಗೆ ಹಾಜರುಪಡಿಸಲು ಜಡ್ಜ್ ಆದೇಶ

ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಬಾರದು ಎಂಬ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ವಿಠ್ಠಲ್ ಗೌಡ ವಿರುದ್ಧ ಬೆಂಗಳೂರಿನ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.

ನ್ಯಾಯಾಂಗ ನಿಂದನೆ ಪ್ರಕರಣದಡಿ ಬೆಂಗಳೂರಿನ 6ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಜೂನ್ 8ರಂದು ಹೊರಡಿಸಲಾದ ವಾರಂಟ್ ಅನ್ವಯ, ವಿಠ್ಠಲ್ ಗೌಡರನ್ನು ಜೂನ್ 30ರೊಳಗೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

Advertisement

ವಾರಂಟ್ ಜಾರಿಯಾದ ನಂತರ ವಿಠ್ಠಲ್ ಗೌಡ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ಪತ್ತೆಹಚ್ಚಲು ನ್ಯಾಯಾಲಯದ ಅಧಿಕಾರಿಗಳು ಮತ್ತು ಪೊಲೀಸರು ಸಂಯುಕ್ತ ಕಾರ್ಯಾಚರಣೆ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸುತ್ತಮುತ್ತ ಪ್ರದೇಶಗಳಲ್ಲಿ ಶೋಧ ಕಾರ್ಯ ತೀವ್ರಗೊಳಿಸಲಾಗಿದೆ.

ಈ ಕಾರ್ಯಾಚರಣೆಯ ಭಾಗವಾಗಿ ವಿಠ್ಠಲ್ ಗೌಡ ಅವರ ಮನೆ, ಅವರ ಸಹೋದರಿ ಕುಸುಮಾವತಿ ಅವರ ನಿವಾಸ ಹಾಗೂ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗಳಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಯಾವುದೇ ಅವಹೇಳನಕಾರಿ ಅಥವಾ ಆಧಾರರಹಿತ ಹೇಳಿಕೆಗಳನ್ನು ನೀಡದಂತೆ ನ್ಯಾಯಾಲಯ ಈ ಹಿಂದೆ ತಡೆಯಾಜ್ಞೆ ನೀಡಿತ್ತು. ಆದಾಗ್ಯೂ, ಆ ಆದೇಶವನ್ನು ಉಲ್ಲಂಘಿಸಿ ವಿಠ್ಠಲ್ ಗೌಡ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:Traffic : ಟ್ರಾಫಿಕ್ ದಟ್ಟಣೆಯಲ್ಲಿ ವಿಶ್ವಕ್ಕೆ ಬೆಂಗಳೂರಿಗೆ 2ನೇ ಸ್ಥಾನ

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ನ್ಯಾಯಾಂಗ ನಿಂದನೆ ಪ್ರಕರಣದಡಿ ಬಂಧನ ವಾರಂಟ್ ಜಾರಿಗೊಳಿಸಿ, ಆರೋಪಿಯನ್ನು ನಿಗದಿತ ಅವಧಿಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *