ನವದೆಹಲಿ : ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿ ಭಂಗವಾದ ಬೆನ್ನಲ್ಲೇ, ಐಎನ್‌ಡಿಐಎ (I.N.D.I.A.) ಮೈತ್ರಿಕೂಟದಲ್ಲಿ ಭಿನ್ನಮತಗಳು ಬಹಿರಂಗವಾಗಿವೆ. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರಿಂದ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವಂತೆ ಡಿಎಂಕೆ ಮನವಿ ಮಾಡಿರುವುದು ವಿರೋಧ ಪಕ್ಷಗಳ ಏಕತೆಗೆ ಹೊಸ ಪ್ರಶ್ನೆಗಳನ್ನು ಎಬ್ಬಿಸಿದೆ.
ಡಿಎಂಕೆ ಸಂಸದ ಕನಿಮೊಳಿ ಅವರು ಲೋಕಸಭಾ ಸ್ಪೀಕರ್‌ಗೆ ಪತ್ರ ಬರೆದು, “ಬದಲಾಗಿರುವ ರಾಜಕೀಯ ಪರಿಸ್ಥಿತಿಗಳ” ಹಿನ್ನೆಲೆ ಡಿಎಂಕೆ ಸದಸ್ಯರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಹಾಗೂ ವಿಜಯ್ ನೇತೃತ್ವದ ಟಿವಿಕೆ (TVK) ನಡುವಿನ ಹೊಸ ರಾಜಕೀಯ ಸಮೀಕರಣದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ ನಟ ವಿಜಯ್ ಮುಖ್ಯಮಂತ್ರಿ ಪಟ್ಟಕ್ಕೆ ಅಡ್ಡಿ? ತಮಿಳುನಾಡು ರಾಜ್ಯಪಾಲರಿಂದ ಗ್ರೀನ್ ಸಿಗ್ನಲ್ ಬಾಕಿ!
ಇದರ ನಡುವೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದು, ಮೈತ್ರಿಕೂಟದೊಳಗಿನ ಅಸಮಾಧಾನ ಮತ್ತಷ್ಟು ಸ್ಪಷ್ಟವಾಗಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್ ಮತ್ತು ಡಿಎಂಕೆ ನಡುವಿನ 11 ವರ್ಷದ ಮೈತ್ರಿ ಮುರಿದಿರುವುದು ಐಎನ್‌ಡಿಐಎ ಮೈತ್ರಿಕೂಟಕ್ಕೆ ದೊಡ್ಡ ಹೊಡೆತವೆಂದು ಪರಿಗಣಿಸಲಾಗಿದೆ. ಮುಂದಿನ ಸಂಸತ್ ಅಧಿವೇಶನದಲ್ಲಿ ಪ್ರಮುಖ ಮಸೂದೆಗಳ ಕುರಿತಾಗಿ ವಿರೋಧ ಪಕ್ಷಗಳ ಒಗ್ಗಟ್ಟು ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಹೆಚ್ಚಿನ ಸುದ್ದಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ


