Breaking News

Weather: ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪ ಹೆಚ್ಚಾಗಿದೆ. ರೈತರು ತಮ್ಮ ಫಸಲು ಉಳಿಸಿಕೊಳ್ಳಲು ಹೊಲ ತೋಟಗಳಿಗೆ ನೀರು ಹಾಯಿಸಲು ಪರದಾಡುತ್ತಿದ್ದಾರೆ.

ಅದರಲ್ಲೂ ಕಾಫಿ ಬೆಳೆಗಾರರು ಕಾಫಿ ಕೊಯ್ಲಿನ ನಂತರ ಹೂಮಳೆಗೆ ಎದುರು ನೋಡುತ್ತಾ ಇದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಕೃತಿ ಕೊಂಚ ಕರುಣೆ ತೋರಿದೆ.

Advertisement

ಇದನ್ನೂ ಓದಿ: ಅಮಾವಾಸ್ಯೆಯಂದು ಮಗು ಜನಿಸಿದರೆ ಅದು ಅಶುಭವೇ? ಜ್ಯೋತಿಷ್ಯ ಶಾಸ್ತ್ರ ಹೇಳೋದೇನು?

ಶ್ರೀಲಂಕಾ ಆಗ್ನೇಯ ಕರಾವಳಿ ಮತ್ತು ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮದ ಕಡೆಗೆ ಚಲಿಸುತ್ತಿದೆ. ಇದರ ನೇರ ಪರಿಣಾಮ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದ ಮೇಲಾಗಲಿದ್ದು, ಮುಂದಿನ 2 ರಿಂದ 3 ದಿನಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಕಾಫಿ ನಾಡುಗಳಾದ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 2-3 ದಿನಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಫೆಬ್ರವರಿ 24 ರವರೆಗೂ ಒಣ ಹವೆ ಮುಂದುವರಿಯಲಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು