Breaking News

ನಟ ‘ದುನಿಯಾ’ ವಿಜಯ್ ಹಾಗೂ ನಾಗರತ್ನ ದಾಂಪತ್ಯ ಅಂತ್ಯ: ವಿಚ್ಛೇದನ ಮಂಜೂರು, 2 ಕೋಟಿ ರೂ. ಜೀವನಾಂಶ ಪಾವತಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ನಟ ‘ದುನಿಯಾ’ ವಿಜಯ್ (Duniya Vijay) ಹಾಗೂ ಅವರ ಪತ್ನಿ ನಾಗರತ್ನ ಅವರ ಸುದೀರ್ಘ ವೈವಾಹಿಕ ವಿವಾದಕ್ಕೆ ಕೊನೆಗೂ ಕಾನೂನಾತ್ಮಕ ತೆರೆಬಿದ್ದಿದೆ. ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿದ್ದ ಈ ವಿಚ್ಛೇದನ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ದಂಪತಿಗೆ ವಿಚ್ಛೇದನ ಮಂಜೂರು ಮಾಡಿ ಮಹತ್ವದ ತೀರ್ಪು ಹೊರಡಿಸಿದೆ.

ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಹೆಚ್. ಶಾಂತಿಭೂಷಣ್ ಅವರನ್ನೊಳಗೊಂಡ ಉನ್ನತ ನ್ಯಾಯಪೀಠವು ಈ ಪ್ರಕರಣದ ವಿಚಾರಣೆ ನಡೆಸಿ ಅಂತಿಮ ತೀರ್ಪು ಪ್ರಕಟಿಸಿದೆ. ಸುದೀರ್ಘ ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಹಾಗೂ ವೈವಾಹಿಕ ವಿವಾದ ಹೊಂದಿದ್ದ ದಂಪತಿಯ ವಿಚ್ಛೇದನ ಅರ್ಜಿಯನ್ನು ಮಾನ್ಯ ಮಾಡಲಾಗಿದೆ.

ಪತ್ನಿ ನಾಗರತ್ನ ಅವರಿಗೆ ಕಾಯಂ ಜೀವನಾಂಶವಾಗಿ (Permanent Alimony) ಒಟ್ಟು ೨ ಕೋಟಿ ರೂಪಾಯಿಗಳನ್ನು ಪಾವತಿಸುವಂತೆ ನಟ ದುನಿಯಾ ವಿಜಯ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಪತ್ನಿ ಹಾಗೂ ಮೂವರು ಮಕ್ಕಳ ಭವಿಷ್ಯ, ಅವರ ಜೀವನ ನಿರ್ವಹಣೆ ಮತ್ತು ಮುಂದಿನ ಜೀವನದ ಭದ್ರತೆಯ ಪ್ರಮುಖ ಅಂಶಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸಿದೆ.

ಇದನ್ನೂ ಓದಿ: ನೇಪಾಳ ದುರಂತಕ್ಕೂ ಮುನ್ನ ಸಿಕ್ಕಿತ್ತಾ ದೈವಿಕ ಮುನ್ಸೂಚನೆ? ಪಲಾಂಚೋಕ್ ಭಗವತಿ ವಿಗ್ರಹ ಬೆವತ 2 ದಿನದಲ್ಲೇ ಪ್ರಳಯ

ಇದರೊಂದಿಗೆ ನಟ ದುನಿಯಾ ವಿಜಯ್ ಅವರ ಪ್ರಸ್ತುತ ಸಾಮಾಜಿಕ ಸ್ಥಾನಮಾನ, ಚಿತ್ರರಂಗದಲ್ಲಿನ ವೃತ್ತಿಪರ ಗಳಿಕೆ ಹಾಗೂ ಹಣಕಾಸಿನ ಸ್ಥಿತಿಗತಿಗಳನ್ನು ಕೂಲಂಕುಷವಾಗಿ ಪರಾಮರ್ಶಿಸಿದ ನ್ಯಾಯಪೀಠವು ಈ ₹೨ ಕೋಟಿ ಜೀವನಾಂಶದ ಮೊತ್ತವನ್ನು ಸೂಕ್ತವೆಂದು ನಿಗದಿಪಡಿಸಿದೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

 

Leave a Reply

Your email address will not be published. Required fields are marked *