ಬೆಂಗಳೂರು: ಶಬರಿಮಲೆ ದೇವಾಲಯದ ಚಿನ್ನ ಕಳವು ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಆರಂಭಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ನಿಬಂಧನೆಗಳ ಅಡಿಯಲ್ಲಿ ಕೇರಳ, ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಸುಮಾರು 21 ಸ್ಥಳಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪ್ರಮುಖ ಆರೋಪಿ ಬೆಂಗಳೂರಿನಲ್ಲಿರುವ ಉನ್ನಿಕೃಷ್ಣನ್ ಪೊಟ್ಟಿ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮಾಜಿ ಅಧ್ಯಕ್ಷ ಎ ಪದ್ಮಕುಮಾರ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Puttur : ಕಟಾರದಲ್ಲಿ ವಾಮಾಚಾರ ಶಂಕೆ: ಸ್ಥಳೀಯರಲ್ಲಿ ಆತಂಕ
ಕೇರಳ ಪೊಲೀಸರ ಎಫ್‌ಐಆರ್ ಗಮನದಲ್ಲಿಟ್ಟುಕೊಂಡು ಇ.ಡಿ. ಇತ್ತೀಚೆಗೆ ಪಿಎಂಎಲ್‌ಎ ಪ್ರಕರಣವನ್ನು ದಾಖಲಿಸಿತ್ತು. ರಾಜಕೀಯವಾಗಿ ಸೂಕ್ಷ್ಮವಾಗಿರುವ ಈ ಪ್ರಕರಣವನ್ನು ಈಗಾಗಲೇ ಕೇರಳ ಹೈಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ರಾಜ್ಯ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ. ಈ ತನಿಖೆಯು ಅಧಿಕೃತ ದುಷ್ಕೃತ್ಯ, ಆಡಳಿತಾತ್ಮಕ ಲೋಪಗಳು ಮತ್ತು ಅಯ್ಯಪ್ಪ ದೇಗುಲದ ವಿವಿಧ ಕಲಾಕೃತಿಗಳ ಚಿನ್ನ ದುರುಪಯೋಗಪಡಿಸಿಕೊಳ್ಳಲು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವಾರು ಅಕ್ರಮಗಳಿಗೆ ಸಂಬಂಧಿಸಿದೆ.
ದೇವಾಲಯದ ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹಗಳ ಚಿನ್ನದ ಹೊದಿಕೆಯ ತಾಮ್ರದ ತಟ್ಟೆಗಳು ಮತ್ತು ಗರ್ಭಗುಡಿ ದ್ವಾರಗಳಿಂದ ಚಿನ್ನ ನಾಪತ್ತೆಯಾದ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

