ಧನ್‌ಬಾದ್: ಅಕ್ರಮ ಕಲ್ಲಿದ್ದಲು ವ್ಯಾಪಾರ ಮತ್ತು ಮನಿ ಲ್ಯಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಧನ್‌ಬಾದ್‌ನ ಸುಮಾರು 25ಕ್ಕೂ ಹೆಚ್ಚು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೃಹತ್ ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಇಡಿ ಅಧಿಕಾರಿಗಳು ಅಂದಾಜು 1.5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದು, ಅಕ್ರಮ ಜಾಲಕ್ಕೆ ಸಂಬಂಧಿಸಿದ 150 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚರ-ಸ್ಥಿರ ಆಸ್ತಿಪಾಸ್ತಿಗಳು ಹಾಗೂ ಬ್ಯಾಂಕ್ ಖಾತೆಗಳನ್ನು ಪತ್ತೆಹಚ್ಚಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಜಾರ್ಖಂಡ್‌ನಲ್ಲಿ ಇಡಿ ನಡೆಸಿದ ಅತಿದೊಡ್ಡ ಕಾರ್ಯಾಚರಣೆಗಳಲ್ಲಿ ಇದೂ ಒಂದಾಗಿದೆ ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ:
ED conducts massive raid across 25+ Dhanbad locations over coal trade money laundering probe
The agency seized roughly Rs 1.5 crore in cash and traced properties and bank holdings exceeding Rs 150 crore linked to an alleged illegal coal trading network. Officials describe the… pic.twitter.com/RS3rngb31e
— Nabila Jamal (@nabilajamal_) July 30, 2026
ರ‍್ಯಾಪಿಡ್ ಆಕ್ಷನ್ ಫೋರ್ಸ್ ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ (CAPF) ಬಿಗಿ ಭದ್ರತೆಯೊಂದಿಗೆ ಇಡಿ ತಂಡಗಳು ಕಲ್ಲಿದ್ದಲು ಉದ್ಯಮಿಗಳು, ಮಧ್ಯವರ್ತಿಗಳು ಹಾಗೂ ಅವರ ಚಾರ್ಟರ್ಡ್ ಅಕೌಂಟೆಂಟ್‌ಗಳಿಗೆ (CA) ಸೇರಿದ ವಸತಿ ಹಾಗೂ ವಾಣಿಜ್ಯ ಸಂಕೀರ್ಣಗಳ ಮೇಲೆ ಬೆಳಗಿನ ಜಾವದಿಂದಲೇ ಶೋಧ ನಡೆಸಿದವು.
ಇದನ್ನೂ ಓದಿ: ‘ಆರ್‌ಎಸ್‌ಎಸ್‌ಗೆ ಸೇರಿ, ದೇಶಪ್ರೇಮ ಕಲಿಯಿರಿ’: ಪ್ರಿಯಾಂಕಾ ಗಾಂಧಿ ಬೆವರಿಳಿಸಿದ ಅನುರಾಗ್ ಠಾಕೂರ್
ಅಕ್ರಮ ಕಲ್ಲಿದ್ದಲು ಗಣಿಗಾರಿಕೆ, ಕಲ್ಲಿದ್ದಲು ಸಾಗಣೆಯಿಂದ ಅಕ್ರಮವಾಗಿ ಕಮಿಷನ್/ಲೇವಿ ವಸೂಲಿ ಮತ್ತು ಕಲ್ಲಿದ್ದಲು ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

