ತೋಟದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ತೋಟಗಳಿಗೆ ದಾಳಿ ಮಾಡಿ ಕೃಷಿಯನ್ನಷ್ಟಲ್ಲದೆ ಮಾನವರ ಮೇಲೂ ದಾಳಿ ಮಾಡುತ್ತಿದೆ. ಇಂತಹ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯಿತು‌. ಸುಮಾರು‌ 15ಕ್ಕೂ ಹೆಚ್ಚು ಕಾಡಾನೆಗಳನ್ನು ಕಾಡಿಗಟ್ಟಲಾಯಿತು.

ಇದನ್ನೂ ಓದಿಪತಿಯ ಮೇಲೇರಿ ಭೀಕರವಾಗಿ ಹಲ್ಲೆ ನಡೆಸಿದ ಪತ್ನಿ: ವಿಡಿಯೋ ವೈರಲ್

Advertisement

ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ ಟಾಟಾ ಕಾಫಿ ಮಾರ್ಗೋಳ್ಳಿ ಎಸ್ಟೇಟ್ ಹಾಗೂ ಮೈಲಪುರ ಎಸ್ಟೇಟ್‌ಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ, ತೆಂಗು, ಕಾಫಿ ಹಾಗೂ ಬಾಳೆ ಬೆಳೆಗಳನ್ನು ನಾಶಪಡಿಸುತ್ತಿದ್ದ ಸುಮಾರು 16 ಕ್ಕೂ ಹೆಚ್ಚು ಕಾಡಾನೆಗಳು (03 ಮರಿಗಳು ಸೇರಿ) ಇರುವ ಎರಡು ಪ್ರತ್ಯೇಕ ಹಿಂಡುಗಳನ್ನು ಕಾರ್ಯಾಚರಣೆ ಮೂಲಕ ಮಾಲ್ದಾರೆ ಮೀಸಲು ಅರಣ್ಯಕ್ಕೆ ಹಿಮ್ಮೆಟ್ಟಿಸಲಾಯಿತು.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು