ಮಡಿಕೇರಿ: ಇಂದಿನ ಆಧುನಿಕ ನಾಗಲೋಟದಿಂದ ಯುವಜನರು ಪುಸ್ತಕ ಸಂಸ್ಕೃತಿಯಿಂದ ದೂರ ಸರಿಯುತ್ತಿದ್ದು, ಯುವಜನರನ್ನು ಪುಸ್ತಕ ಓದುವಂತಾಗಲು ಹತ್ತಿರಕ್ಕೆ ತರುವಲ್ಲಿ ‘ಅಂಗಳದಲ್ಲಿ ತಿಂಗಳ ಪುಸ್ತಕ ಹಾಗೂ ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ ಅವರು ತಿಳಿಸಿದ್ದಾರೆ.
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಸಾಹಿತ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಕನ್ನಡ ಪುಸ್ತಕ ಪ್ರಾಧಿಕಾರದ ಯೋಜನೆ “ಮನೆಗೊಂದು ಗ್ರಂಥಾಲಯ” ಕರಪತ್ರ ಬಿಡುಗಡೆ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್
ಯುವಜನರಲ್ಲಿ ಪುಸ್ತಕ ಸಂಸ್ಕೃತಿ ಭಿತ್ತಬೇಕು ಎಂಬ ಉದ್ದೇಶದಿಂದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈಗಾಗಲೇ 30 ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ಬಾಕಿ ಇದೆ ಎಂದು ಹೇಳಿದರು.
ಜ್ಞಾನಪೀಠ ಪ್ರಶಸ್ತಿ ಪಡೆದವರು ಸೇರಿದಂತೆ ಹಲವು ಸಾಹಿತಿ ಹಾಗೂ ಕವಿಗಳ ಹೆಸರಿನಲ್ಲಿ ವಿಶೇಷ ದಿನದಂದು ಕಾರ್ಯಕ್ರಮ ಆಯೋಜಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಸಾಹಿತಿಗಳು ನೀಡಿರುವ ಕೊಡುಗೆಯನ್ನು ಸ್ಮರಿಸಲಾಗುತ್ತದೆ ಎಂದರು.
‘ಪ್ರತೀ ಮನೆಯಲ್ಲೂ ಪೂಜಾ ಕೊಠಡಿ ಇರುವಂತೆ ಗ್ರಂಥಾಲಯ ಭಂಡಾರವು ಸಹ ಇದ್ದಲ್ಲಿ, ಇಡೀ ಕುಟುಂಬದ ಎಲ್ಲರ ಜ್ಞಾನಾರ್ಜನೆ ಹೆಚ್ಚಲಿದೆ ಎಂದರು.’
ರಾಜ್ಯದಲ್ಲಿ ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ಭಂಡಾರ ಸ್ಥಾಪಿಸಲಾಗುತ್ತದೆ. ಜನ ಪ್ರತಿನಿಧಿಗಳು, ಚಲನಚಿತ್ರ ನಟ ನಟಿಯರು ಸೇರಿದಂತೆ ಎಲ್ಲರ ಮನೆಯಲ್ಲೂ ಸಹ ಪುಸ್ತಕ ಭಂಡಾರ ಇರಬೇಕು ಎಂಬ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮುಂದಿನ ಪೀಳಿಗೆಗೆ ಪುಸ್ತಕ ಓದುವ ಸಂಸ್ಕೃತಿ ಹೆಚ್ಚಬೇಕು. ಇದರಿಂದ ಜ್ಞಾನಾರ್ಜನೆ, ವಿಚಾರಧಾರೆ ತಿಳಿಯಬೇಕು ಎಂದರು.
ಮನೆ ಮಂದಿಗೆ ಪುಸ್ತಕ ಮಹತ್ವದ ಜಾಗೃತಿ ಮೂಡಿಸಬೇಕು. ಕೊಡಗು ಜಿಲ್ಲೆಯಲ್ಲಿ ಬರಹಗಾರರ ಸಂಖ್ಯೆ ಹೆಚ್ಚಿದ್ದು. ಪ್ರಕಟವಾಗುವ ಪುಸ್ತಕಗಳು ಮಾರಾಟವಾಗಬೇಕು. ಎಲ್ಲರೂ ಯೋಚಿಸಬೇಕು ಎಂದರು.
ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಚ್.ಟಿ.ಅನಿಲ್ ಅವರು ಮಾತನಾಡಿ ಪುಸ್ತಕ ಓದುವ ಅಭಿರುಚಿ ಎಲ್ಲರಲ್ಲೂ ಇರಬೇಕು ಎಂದು ಹೇಳಿದರು.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

