ಬಂಟ್ವಾಳ: ತಾಲೂಕಿನ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಾಸವಿ ಕೆ.ಸಿ. ಅವರು ಜೆಇಇ ಮೈನ್ಸ್ ಪರೀಕ್ಷೆ 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಕೇಂದ್ರ ಸರಕಾರದ ಎನ್‌ಟಿಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆ.ಇ.ಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ವಾಸವಿ ಅವರು 97.68 ಪರ್ಸಂಟೈಲ್ ಅಂಕಗಳನ್ನು ಪಡೆದು ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಇವರ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಶಿಕ್ಷಕ ವರ್ಗ ಅಭಿನಂದನೆ ಸಲ್ಲಿಸಿದೆ.

ಇದನ್ನೂ ಓದಿ: ಪುತ್ತೂರು: ರೈತ ಕುಟುಂಬದ ಮಗಳು ದೀಪಿಕಾ ಶೆಟ್ಟಿ ನ್ಯಾಯಾಧೀಶೆಯಾಗಿ ಆಯ್ಕೆ
ಜೆಇಇ ಮೈನ್ಸ್ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸುವ ಭಾರತದ ಪ್ರಮುಖ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾಗಿದೆ. ಇದು NIT, IIIT ಮತ್ತು ಇತರ ಪ್ರತಿಷ್ಠಿತ ಸಂಸ್ಥೆಗಳಲ್ಲಿ B.E/B.Tech/B.Arch/B.Planning ಕೋರ್ಸ್‌ಗಳಿಗೆ ಪ್ರವೇಶ ನೀಡುತ್ತದೆ. ವರ್ಷಕ್ಕೆ ಎರಡು ಬಾರಿ ಆನ್‌ಲೈನ್‌ನಲ್ಲಿ ನಡೆಯುವ ಈ ಪರೀಕ್ಷೆಯು ಐಐಟಿ (IIT) ಪ್ರವೇಶಕ್ಕೆ (JEE Advanced) ಅರ್ಹತೆಯಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

