ಮಡಿಕೇರಿ: ಕರ್ನಾಟಕದಲ್ಲಿ ಬಾಂಬ್ ಬೆದರಿಕೆ ಸಂದೇಶಗಳ ಸರಮಾಲೆ ಮುಂದಿವರಿದಿದೆ. ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಬಂದು ವಕೀಲರು, ಸಿಬ್ಬಂದಿ ಆತಂಕಕ್ಕೊಳಗಾಗುವಂತಾಯಿತು.
ಸದ್ಯ ಪೊಲೀಸರು, ಶ್ವಾನ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಣಾಮವಾಗಿ ಇದೀಗ, ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸುವವರ ವಿರುದ್ಧ ಕಠಿಣ ಕ್ರಮ ಆಗಬೇಕೆಂಬ ಆಗ್ರಹ ಹೆಚ್ಚಾಗಿದೆ.

ಇದನ್ನೂ ಓದಿ: ಕ್ಯಾಂಪ್ಕೋದಿಂದ ಗೇರು ಖರೀದಿ ಆರಂಭಕ್ಕೆ ಬೆಳೆಗಾರರ ಮನವಿ: ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರಗೆ ಸನ್ಮಾನ
ಕರ್ನಾಟಕದಲ್ಲಿ ನ್ಯಾಯಾಂಗ ಸಂಸ್ಥೆಗಳನ್ನೇ ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಸಂದೇಶಗಳು ಬಂದಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ನ್ಯಾಯಾಲಯ ಸಮುಚ್ಚಯಕ್ಕೆ ಅನಾಮಧೇಯ ವ್ಯಕ್ತಿ ಇ-ಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದು, ಪೊಲೀಸರು ತಕ್ಷಣ ಎಚ್ಚೆತ್ತುಕೊಂಡು ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಿದರು.
ಬಳಿಕ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು. ಸಂದೇಶ ಕಳುಹಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

