ಕಾಸರಗೋಡು: ಕೌಟುಂಬಿಕ ಕಲಹದ ಹಿನ್ನೆಲೆ ತಂದೆಯೇ ತನ್ನ 18 ವರ್ಷದ ಮಗಳನ್ನು ಕೊಲೆಗೈದಿರುವ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ.
ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ ಎಂದು ತಿಳಿದು ಬಂದಿದ್ದು, ಆಕೆಯ ತಂದೆ ಉಮ್ಮರ್ ಫಾರೂಕ್ ಕೊಲೆಗೈದವರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪುತ್ತೂರು: ಒಂಟಿ ಮಹಿಳೆಯ ಮನೆಯಲ್ಲಿದ್ದ ಅನ್ಯಮತೀಯ ಪೊಲೀಸರ ವಶಕ್ಕೆ
ಘಟನೆಗೆ ಸಂಬಂಧಿಸಿ ಆರೋಪಿ ಉಮ್ಮರ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಮೃತಪಟ್ಟಳೆಂದು ತಿಳಿದು ಬಂದಿದೆ.
ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದು, ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಫಾರೂಕ್ ತನ್ನ ಮಗಳನ್ನು ಕೊಲೆಗೈದಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

