ಉಡುಪಿ: ಮಣಿಪಾಲದ ಈಶ್ವರ ನಗರದಲ್ಲಿರುವ ಕರ್ನಾಟಕ ಹಾಲು ಒಕ್ಕೂಟದ (KMF) ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಸೋಮವಾರ (ಏಪ್ರಿಲ್ 20) ಭಾರಿ ಬೆಂಕಿ ಅವಘಡ ಸಂಭವಿಸಿದೆ. ಘಟಕದ ಆವರಣದಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಹಳೆಯ ಯಂತ್ರೋಪಕರಣಗಳಿಗೆ ಹಾನಿಯಾಗಿದೆ.
ಈ ಹಳೆಯ ಕೆಎಂಎಫ್ ಘಟಕವು ಪ್ರಸ್ತುತ ಬಳಕೆಯಲ್ಲಿಲ್ಲದಿದ್ದರೂ, ಅಲ್ಲಿ ಕೆಲವು ದುರಸ್ತಿ ಅಥವಾ ಪಕ್ಕದ ಜಾಗದಲ್ಲಿ ವೆಲ್ಡಿಂಗ್ ಕೆಲಸಗಳು ನಡೆಯುತ್ತಿದ್ದವು ಎನ್ನಲಾಗಿದೆ. ಈ ವೇಳೆ ಆಕಸ್ಮಿಕವಾಗಿ ಸಿಡಿದ ಕಿಡಿಯಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಗೆಯು ಘಟಕದಲ್ಲಿದ್ದ ಉಪಯೋಗವಿಲ್ಲದ ಹಳೆಯ ಬಾಯ್ಲರ್‌ಗೆ ತಗುಲಿದ್ದು, ಬೆಂಕಿಯ ತೀವ್ರತೆಗೆ ಬಾಯ್ಲರ್ ಸಂಪೂರ್ಣವಾಗಿ ಜಖಂಗೊಂಡಿದೆ.

ಇದನ್ನೂ ಓದಿ: ಮಂಗಳೂರು ಪೊಲೀಸರ ಭರ್ಜರಿ ಬೇಟೆ: 46.5 ಲಕ್ಷ ಮೌಲ್ಯದ ಎಂಡಿಎಂಎ ವಶ; ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ!
ಮಾಹಿತಿ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಸುಮಾರು ಒಂದು ಗಂಟೆಯ ಸತತ ಕಾರ್ಯಾಚರಣೆಯ ನಂತರ ಬೆಂಕಿಯನ್ನು ನಂದಿಸುವಲ್ಲಿ ಸಿಬ್ಬಂದಿ ಯಶಸ್ವಿಯಾದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಪಕ್ಕದ ಕಟ್ಟಡಗಳಿಗೆ ಅಥವಾ ಜನನಿಬಿಡ ಪ್ರದೇಶಕ್ಕೆ ಹರಡುವ ಮೊದಲೇ ನಂದಿಸಲಾಗಿದ್ದರಿಂದ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಬೆಂಕಿ ಅವಘಡದಿಂದ ಉಂಟಾದ ನಷ್ಟದ ಬಗ್ಗೆ ನಿಖರ ಮಾಹಿತಿ ಲಭ್ಯವಾಗಬೇಕಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

