ಹುಬ್ಬಳ್ಳಿ: ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಅಗ್ನಿ ಅವಘಡದಲ್ಲಿ ಕಾಂಪ್ಲೆಕ್ಸ್ ವೊಂದು ಹೊತ್ತಿ ಉರಿದು ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಮರಾಠಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Politics : ಜಗತ್ತಿನ ಸಮಸ್ಯೆಗಳಿಗೆ ಭಾರತೀಯ ಪರಂಪರೆಯಲ್ಲಿದೆ ಪರಿಹಾರ: ಅಮಿತ್ ಶಾ
ಕ್ಷಣಾರ್ಧದಲ್ಲೇ ಬೆಂಕಿ ಇಡೀ ಕಾಂಪ್ಲೆಕ್ಸ್ಗೆ ವ್ಯಾಪಿಸಿದ್ದು, ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸಪಟ್ಟಿದ್ದಾರೆ.
ಕಾಂಪ್ಲೆಕ್ಸ್ನೊಳಗಿದ್ದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ನಾಶವಾಗಿವೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಕಿ ಅವಘಡದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

