ಬೆಂಗಳೂರು: ದೇಶದ ರಾಜಕಾರಣದ ಧೀಮಂತ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೆಗಲಿಗೆ ಹೆಗಲಾಗಿ ನಿಂತಿದ್ದ ಅವರ ಧರ್ಮಪತ್ನಿ ಚನ್ನಮ್ಮ (೮೪) ಶನಿವಾರ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆಯಿಂದಾಗಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ವಿಧಿವಶರಾಗಿದ್ದಾರೆ. ಬದುಕಿನುದ್ದಕ್ಕೂ ಹತ್ತಾರು ಕಷ್ಟ-ಸಂಕಷ್ಟಗಳನ್ನು ಎದುರಿಸಿ ಗೆದ್ದಿದ್ದ ಚನ್ನಮ್ಮ, ಈ ಬಾರಿ ಅನಾರೋಗ್ಯದ ಎದುರು ಸೋತು ಜಗತ್ತಿಗೆ ವಿದಾಯ ಹೇಳಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇಲ್ಲಿದೆ ನೋಡಿ ಮೋದಿ ಟ್ವೀಟ್:
Deeply pained by the passing of Smt. Chennamma Ji, wife of former Prime Minister Shri Deve Gowda Ji. She was admired for her humility and passion towards serving society. In this hour of grief, my thoughts are with Shri Deve Gowda Ji and his entire family. Om Shanti.
— Narendra Modi (@narendramodi) July 18, 2026
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಕಂಬನಿ ಮಿಡಿದಿದ್ದಾರೆ. “ಮಾಜಿ ಪ್ರಧಾನಿ ಶ್ರೀ ದೇವೇಗೌಡ ಜೀ ಅವರ ಪತ್ನಿ ಚನ್ನಮ್ಮ ಅವರ ನಿಧನದ ಸುದ್ದಿ ನನಗೆ ತೀವ್ರ ಆಘಾತ ಮತ್ತು ನೋವುಂಟು ಮಾಡಿದೆ. ಸಮಾಜ ಸೇವೆಯ ಮೇಲಿದ್ದ ಅವರ ಅಪಾರ ಕಾಳಜಿ ಹಾಗೂ ಅವರ ವಿನಮ್ರ ಸ್ವಭಾವ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು. ಈ ದುಃಖದ ಸಮಯದಲ್ಲಿ, ದೇವೇಗೌಡರ ಕುಟುಂಬದ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ. ಓಂ ಶಾಂತಿ” ಎಂದು ಪ್ರಧಾನಿ ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

