Breaking News

ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಗದಗ: ಜಿಲ್ಲೆಯಲ್ಲಿ ರಾಜಕೀಯ ವಲಯವನ್ನು ಕದಡುವಂತ ಘಟನೆ ನಡೆದಿದೆ. ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಕಮಿಷನ್ ಹಣ ಪಡೆಯುತ್ತಿದ್ದ ವೇಳೆ ಧಾರಾವಾಡ ಜಿಲ್ಲಾ ಕರ್ನಾಟಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ಕಮಿಷನ್ ಆರೋಪ–ಪ್ರತ್ಯಾರೋಪಗಳು ನಡೆಯುತ್ತಿರುವ ಸಂದರ್ಭದಲ್ಲೇ ಈ ಘಟನೆ ಬೆಳಕಿಗೆ ಬಂದಿದೆ. ಶಾಸಕರ ಜೊತೆ ಅವರ ಪಿಎಗಳಾದ ಮಂಜುನಾಥ್ ಹಾಗೂ ಗುರು ಅವರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement

ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಶಾಸಕರಿಗೆ ಸೇರಿದ ಬಾಲಾಜಿ ಆಸ್ಪತ್ರೆಯಲ್ಲಿ ಗುತ್ತಿಗೆದಾರರಿಂದ ಐದು ಲಕ್ಷ ರೂಪಾಯಿ ಕಮಿಷನ್ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಲಾಗಿದೆ.

ಸಣ್ಣ ನೀರಾವರಿ ಇಲಾಖೆಯ ರಸ್ತೆ ಬದಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು 11 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ. ಕ್ಲಾಸ್-1 ಗುತ್ತಿಗೆದಾರ ವಿಜಯ್ ಪೂಜಾರಿ ಅವರಿಂದ ಹಣ ಪಡೆಯಲಾಗುತ್ತಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಎಟಿಎಂಗೆ ಹಾಕಿದ 3.40 ಕೋಟಿ ರೂ. ಹಣ ಮಾಯ! ಸಿಬ್ಬಂದಿಗಳ ಕೈಚಳಕ ಹೇಗಿತ್ತು ನೋಡಿ

ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳು ಮುಂದುವರಿಯುತ್ತಿವೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು