ಮಂಡ್ಯ: ಜಿಲ್ಲೆಯ ಹನಕೆರೆ ಸಮೀಪದ ಹೊನ್ನಗಾನಹಳ್ಳಿ ಬಳಿ ಗಾರ್ಮೆಂಟ್ಸ್ ಮಹಿಳಾ ನೌಕರರನ್ನು ಕರೆದೊಯ್ಯುತ್ತಿದ್ದ ವಾಹನವೊಂದು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 24 ಕ್ಕೂ ಹೆಚ್ಚು ಮಹಿಳಾ ನೌಕರರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್, ಅಪಘಾತದ ತೀವ್ರತೆಯ ಹೊರತಾಗಿಯೂ ಯಾವುದೇ ಜೀವಹಾನಿ ಸಂಭವಿಸದೇ ಎಲ್ಲಾ ನೌಕರರು ಪ್ರಾಣಾಪಾಯದಿಂದ ಪಾರಾಗಿದ್ದು, ಸಾರ್ವಜನಿಕರು ಹಾಗೂ ಕುಟುಂಬಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದು, ತಕ್ಷಣವೇ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಹಾಗೂ ವೈದ್ಯರನ್ನು ಸಂಪರ್ಕಿಸಿ ಘಟನೆಯ ವಿವರಗಳನ್ನು ಪಡೆದುಕೊಂಡಿದ್ದಾರೆ. ಗಾಯಗೊಂಡಿರುವ ಎಲ್ಲಾ 24 ಮಹಿಳಾ ನೌಕರರಿಗೂ ಯಾವುದೇ ರೀತಿಯ ಕೊರತೆಯಾಗದಂತೆ ತಕ್ಷಣವೇ ಅತ್ಯುತ್ತಮ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ವೈದ್ಯಕೀಯ ಸಿಬ್ಬಂದಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಮಂಡ್ಯ: ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಚಾಲಕ ಸ್ಥಳದಲ್ಲೇ ದಾರುಣ ಸಾವು
ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಲಾಗಿದ್ದು, ಅಪಘಾತದ ಕುರಿತು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮನವಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

