Breaking News

ಶಾಸಕ ಆಶೋಕ್ ಕುಮಾರ್ ರೈಗೆ ಮಂತ್ರಿ ಸ್ಥಾನ ನೀಡಿ!: ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಆಗ್ರಹ

ಪುತ್ತೂರು, ಫೆ.7:  ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು, ತಮ್ಮ ತಂದೆಯೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪುನರುಚ್ಚರಿಸಿದ್ದಾರೆ. ಈ ಹೇಳಿಕೆಯು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣಕ್ಕೆ ಸಂದೇಶ ರವಾನಿಸುವ ಪ್ರಯತ್ನವಾಗಿದೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿಗರು ವ್ಯಂಗ್ಯವಾಡಿದ್ದಾರೆ. ಇದರ ನಡುವೆ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು, ಭವಿಷ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪುತ್ತೂರು ಕಾಂಗ್ರೆಸ್ ಭವನವನ್ನು ಉದ್ಘಾಟಿಸಲಿ ಎಂದು ಹಾರೈಸಿದ್ದಾರೆ.

ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಮಾಜಿ ಸಚಿವ ಅಶೋಕ್ ರೈ ಅವರು, ‘ಶಿಲಾನ್ಯಾಸ ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ‌’ ಎಂದು ಹೇಳುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಆರು ತಿಂಗಳ ಬಳಿಕ ಮುಖ್ಯಮಂತ್ರಿಯಾಗುವ ಭರವಸೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಬಣದಲ್ಲಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವ ಬಗ್ಗೆ ಮಾತನಾಡಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಅವರಿಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

Advertisement

ವಿಶೇಷ ಅಧಿವೇಶನ ಮುಗಿಸಿ ಬಜೆಟ್ ಅಧಿವೇಶನಕ್ಕೆ ಸಜ್ಜಾಗುತ್ತಿರುವಾಗಲೇ, ಮುಖ್ಯಮಂತ್ರಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಪಂಚ ವಾರ್ಷಿಕ ಮಾತುಗಳು ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ಮುಖ್ಯಮಂತ್ರಿ ಸ್ಥಾನದ ಕುರಿತು ಚರ್ಚೆಗೆ ಕಾರಣವಾಗಿವೆ. ಈ ಮಾತುಗಳು ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳಿಗೆ ಮತ್ತಷ್ಟು ತುಪ್ಪ ಸುರಿದು ಬೆಂಕಿ ಹಚ್ಚಿವೆ. ಬದಲಾವಣೆ ಜಗದ ನಿಯಮವಾಗಿದ್ದರೂ, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಕುರಿತಾದ ಪೈಪೋಟಿ ನಿರಂತರವಾಗಿ ಸದ್ದು ಮಾಡುತ್ತಿದೆ.

ಇದನ್ನೂ ಓದಿ: “ಅವರೇ ನಮ್ಮ ಪಾಲಿಗೆ ಹೈಕಮಾಂಡ್”: ಯತೀಂದ್ರ ಹೇಳಿಕೆಗೆ ಪರೋಕ್ಷವಾಗಿ ತಿರುಗೇಟು ನೀಡಿದ ಡಿಕೆ ಶಿವಕುಮಾರ್

ಐದು ವರ್ಷದ ಆಡಳಿತಾವಧಿಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಅಧಿಕಾರ ಹಂಚಿಕೆ ವಿಚಾರವಾಗಿ ಮಾತಿನ ಜಟಾಪಟಿ ಜೋರಾಗಿದೆ. ಯತೀಂದ್ರ ಸಿದ್ದರಾಮಯ್ಯ ಅವರ ‘ನಮ್ಮ ಹೈಕಮಾಂಡ್’ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಕನಸು ಕಾಣೋದು ತಪ್ಪಲ್ಲ ಎಂದು ಗೇಲಿ ಮಾಡಿದ್ದಾರೆ. ರಾಜ್ಯ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಜ್ಜಾಗುತ್ತಿರುವಾಗಲೇ ಈ ಕುರ್ಚಿ ಕಿತ್ತಾಟ ಆರಂಭವಾಗಿದೆ. ಅಧಿಕಾರ ಹಂಚಿಕೆಯಲ್ಲಿ ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆ ಇಲ್ಲವಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು