ವಾರದ ಮೊದಲ ದಿನವೇ ಆಭರಣ ಪ್ರಿಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಬುಲಿಯನ್ ಮಾರುಕಟ್ಟೆಯಲ್ಲಿ ಇಂದು (ಫೆಬ್ರವರಿ 23, 2026) ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಗಣನೀಯ ಏರಿಕೆ ಕಂಡಿವೆ. ಚಿನ್ನದ ಬೆಲೆ 190 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 25 ರೂ ಜಿಗಿದಿದೆ. ಆಭರಣ ಚಿನ್ನದ ಬೆಲೆ 14,600 ರೂನಿಂದ 14,790 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 16,101 ರೂಗೆ ಏರಿಯಾಗಿದೆ. ಚಿನ್ನದ ಬೆಲೆಯಲ್ಲಿ ಇಂದು ಪ್ರತಿ 10 ಗ್ರಾಮ್‌ಗೆ ಸುಮಾರು 190 ರೂಪಾಯಿ ಏರಿಕೆ ಕಂಡುಬಂದಿದೆ.
22 ಕ್ಯಾರೆಟ್ ಚಿನ್ನದ ಬೆಲೆ ಶನಿವಾರದ ಅಂತ್ಯಕ್ಕೆ 14,600 ರೂಪಾಯಿ ಇದ್ದ ಆಭರಣ ಚಿನ್ನದ ಬೆಲೆ ಇಂದು 14,790 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತಿ 10 ಗ್ರಾಮ್‌ಗೆ 16,101 ರೂಪಾಯಿ ತಲುಪಿದೆ.ಬೆಳ್ಳಿ ಬೆಲೆಯು ಪ್ರತಿ ಗ್ರಾಮ್‌ಗೆ 25 ರೂಪಾಯಿ ಏರಿಕೆ ಕಾಣುವ ಮೂಲಕ ಗ್ರಾಹಕರಿಗೆ ದೊಡ್ಡ ಶಾಕ್ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಹಾಗೂ ವಾಣಿಜ್ಯ ನಗರಿ ಮುಂಬೈನಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಮ್‌ಗೆ 300 ರೂಪಾಯಿ ದಾಟಿದೆ.

ಇದನ್ನೂ ಓದಿ: ಉದ್ಯಮಿ ವಿಜಯ್ ಮಲ್ಯ ಭಾರತಕ್ಕೆ ಬರುವುದು ಫಿಕ್ಸ್?: ಬಾಂಬೆ ಹೈಕೋರ್ಟ್ ಮಹತ್ವದ ಆದೇಶ, ಮಲ್ಯ ವಾದಗಳೇನು?
ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿಯೂ ಬೆಳ್ಳಿ ಬೆಲೆ ಇದೇ ಮಟ್ಟದಲ್ಲಿ ಮುಂದುವರಿದಿದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ ಮತ್ತು ಹೂಡಿಕೆದಾರರು ಸುರಕ್ಷಿತ ಹೂಡಿಕೆಯಾಗಿ ಚಿನ್ನದತ್ತ ಒಲವು ತೋರುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗಿದೆ.
ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

