Breaking News

Chikkamagalur : ಮದುವೆಗೂ ಮುನ್ನ ತಾಯಿಯಾದ ಮೊಮ್ಮಗಳು: ಶಿಶುವಿನ ಕತ್ತು ಹಿಸುಕಿದ ಅಜ್ಜಿ!

ಚಿಕ್ಕಮಗಳೂರು : ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಕಾರಣಕ್ಕೆ, ನರ್ಸ್ ಆಗಿದ್ದ ಯುವತಿ ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದು, ಮಗು ಹುಟ್ಟಿದ ತಕ್ಷಣ ಮನೆಯವರೆಲ್ಲಾ ಸೇರಿ ಕ್ರೂರ ನಿರ್ಧಾರವೊಂದನ್ನು ತೆಗೆದುಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಹೀಗೊಂದು ಬಹಳ ನೋವಿನ ವಿಚಾರ, ಇಡೀ ಸಮಾಜವೇ ತಲೆತಗ್ಗಿಸುವಂತಹ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾದವಳು ನರ್ಸ್. ಹೌದು… ಕೊಲೆಯಾದ ಮಗುವಿನ ತಾಯಿ ವೃತ್ತಿಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಯುವತಿ. ಈಕೆ ಮದುವೆಗೆ ಮೊದಲೇ ಗರ್ಭಿಣಿಯಾಗಿದ್ದು, ಕುಟುಂಬದ ಗೌರವದ ದೃಷ್ಟಿಯಿಂದ ಈ ವಿಷಯವನ್ನು ಗುಟ್ಟಾಗಿಡಲಾಗಿತ್ತು. ಮದುವೆಯಾಗದ ಮೊಮ್ಮಗಳು ಗರ್ಭಿಣಿಯಾದ ವಿಷಯ ಹೊರಗೆ ತಿಳಿದರೆ ಎಲ್ಲಿ ಗೌರವ ಹೋಗುತ್ತದೋ ಎಂಬ ಭಯಕ್ಕೆ, ಹುಟ್ಟಿದ ಕೇವಲ ಒಂದು ನಿಮಿಷಕ್ಕೆ ಗಂಡು ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದೆ.

Advertisement

ಹೀಗೆ ಕಣ್ಣುಬಿಡುವ ಮುನ್ನ ಕೊನೆಯುಸಿರೆಳೆದ ಮಗುವನ್ನು ಬ್ಯಾಗ್‌ನಲ್ಲಿ ತುಂಬಿಸಿಕೊಂಡು ಹೋಗಿ, ಜನವಸತಿ ಇಲ್ಲದ ತಿಪ್ಪೆಯ ಗುಂಡಿಯೊಂದರಲ್ಲಿ ಹೂತು ಬಂದಿದ್ದು, ತಿಪ್ಪೆ ಗುಂಡಿಯ ಪಕ್ಕದ ಮನೆಯ ಯುವಕನಿಗೆ ಅಲ್ಲಿ ಏನೋ ಹೂತು ಹಾಕಿರುವ ಬಗ್ಗೆ ಅನುಮಾನ ಮೂಡಿದೆ. ಆತ ಪೊಲೀಸರಿಗೆ ಮಾಹಿತಿ ನೀಡಿದ ಬೆನ್ನಲ್ಲೇ ಲಕ್ಕವಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ನಡೆಸಿದಾಗ ಹೂತು ಹಾಕಿದ್ದ ಮಗುವಿನ ಮೃತದೇಹ ಪತ್ತೆಯಾಗಿದೆ. ಪ್ರಕರಣವನ್ನು ದಾಖಲಿಸಿದ ಪೋಲಿಸರು ಮಗುವಿನ ತಾಯಿ, ಅಪ್ಪ, ಅಮ್ಮ ಮತ್ತು ಅಜ್ಜಿಯನ್ನು ವಶಕ್ಕೆ ಪಡೆದಿದ್ದಾರೆ ಎಂಬುವುದು ವರದಿಯಾಗಿದೆ.

ಇದನ್ನೂ ಓದಿ : ರೋಗ ಲಕ್ಷಣಕ್ಕಿಂತ ಮುನ್ನವೇ ಅಲ್ಜೈಮರ್ ಕಾಯಿಲೆ ಪತ್ತೆಹಚ್ಚುತ್ತೆ AI

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

News Source : G1 News

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು