Breaking News

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಭೀಕರ ಬೆಂಕಿ; 8 ಪ್ರಯಾಣಿಕರು ಸಜೀವ ದಹನ

ಗ್ರೇಟರ್ ನೋಯ್ಡಾ: ದೆಹಲಿಯಿಂದ ಉತ್ತರ ಪ್ರದೇಶ ಹಾಗೂ ಬಿಹಾರದತ್ತ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ ಒಂದರಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 8 ಜನರು ಸಜೀವವಾಗಿ ದಹನಗೊಂಡಿದ್ದಾರೆ. ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಈ ಕರುಳಬಳ್ಳಿ ಹಿಂಡುವ ದುರಂತದಲ್ಲಿ ಹಲವು ಪ್ರಯಾಣಿಕರು ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ.

ರಾತ್ರಿಯ ವೇಳೆಯಲ್ಲಿ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ದಾವಾನಲ ಇಡೀ ಬಸ್ ಅನ್ನು ಆವರಿಸಿಕೊಂಡಿದ್ದರಿಂದ ಪ್ರಯಾಣಿಕರಿಗೆ ಹೊರಬರಲು ದಾರಿ ಸಿಗದೆ ತೀವ್ರ ಪರದಾಡುವಂತಾಯಿತು.

ಬಸ್‌ನಾದ್ಯಂತ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರಾಟದ ತೊಂದರೆ ಎದುರಾಗಿ ಹಲವರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದರು. ಪ್ರಾಣಭಯದಿಂದ ತತ್ತರಿಸಿದ ಕೆಲ ಪ್ರಯಾಣಿಕರು ತಮ್ಮ ಜೀವ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಗೆ ಹಾರಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ತುರ್ತು ರಕ್ಷಣಾ ಪಡೆ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ: ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವ ಲೋಗೋ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಅಪಘಡದಿಂದ ಪವಾಡಸ ದೃಶ್ಯವನ್ನು ವಿವರಿಸಿದ ಸಂತ್ರಸ್ತ ಪ್ರಯಾಣಿಕರೊಬ್ಬರು ಸುದ್ದಿ ಸಂಸ್ಥೆ ANI ಗೆ ಮಾಹಿತಿ ನೀಡಿ, “ನಾನು ನಿದ್ರೆಗೆ ಜಾರಿದ್ದಾಗ ಯಾರೋ ಬಸ್‌ಗೆ ಬೆಂಕಿ ಬಿದ್ದಿದೆ ಎಂದು ಗಟ್ಟಿಯಾಗಿ ಚೀರಿ ಎಬ್ಬಿಸಿದರು. ಹೊರಗೆ ಬರಲು ಯತ್ನಿಸಿದಾಗ ದಟ್ಟ ಹೊಗೆ ತುಂಬಿತ್ತು. ಪ್ರಾಣ ಉಳಿಸಿಕೊಳ್ಳುವುದು ಅತ್ಯಂತ ಕಷ್ಟಕರವಾಗಿತ್ತು. ಜಗತ್ತೇ ಮುಳುಗಿಹೋದಂತಹ ಭೀಕರ ಸ್ಥಿತಿಯಲ್ಲಿ ಹೇಗೋ ಕಷ್ಟಪಟ್ಟು ಹೊರಬಂದೆವು. ಬಸ್ ಭರ್ತಿಯಾಗಿತ್ತು” ಎಂದು ಕಣ್ಣೀರಿಟ್ಟಿದ್ದಾರೆ. ಪೊಲೀಸರು ಮತ್ತು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಘಟನಾ ಸ್ಥಳವನ್ನು ವಶಕ್ಕೆ ಪಡೆದುಕೊಂಡಿದ್ದು, ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಅಥವಾ ಶಾರ್ಟ್ ಫ್ಯೂಯಲ್ ಲೀಕ್ ಕಾರಣವೇ ಎಂಬ ಬಗ್ಗೆ ತೀವ್ರ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಮತ್ತಷ್ಟು ಓದಲು ಇಲ್ಲಿ ಕ್ಲಿಕ್‌ ಮಾಡಿ

Leave a Reply

Your email address will not be published. Required fields are marked *