ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ದಶಕಗಳಿಂದ ಕಾಡುತ್ತಿರುವ ಬೋಧಕರ ಕೊರತೆಯನ್ನು ನೀಗಿಸಲು ಸರ್ಕಾರ ಮುಂದಾಗಿದೆ. ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ದೃಷ್ಟಿಯಿಂದ 2,000 ಹೊಸ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಈ ಬಾರಿಯ ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ.
ನೇಮಕಾತಿಯ ಮುಖ್ಯಾಂಶಗಳು:

ಯಾವ ಕಾಲೇಜುಗಳಲ್ಲಿ?: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಈ ನೇಮಕಾತಿ ನಡೆಯಲಿದೆ.
ಶೀಘ್ರ ಪ್ರಕ್ರಿಯೆ: ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲು ಸಂಬಂಧಿಸಿದ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ.
ವಿಶ್ವವಿದ್ಯಾಲಯಗಳಲ್ಲಿ ನೇಮಕ: ಇದರ ಜೊತೆಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1,000 ಬೋಧಕ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ನಿರ್ಧರಿಸಲಾಗಿದೆ.
ಮಹಿಳಾ ಉಪನ್ಯಾಸಕಿಯರಿಗೆ ಶುಭ ಸುದ್ದಿ: ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಇದೇ ಮೊದಲ ಬಾರಿಗೆ 90 ದಿನಗಳ ಪ್ರಸೂತಿ ರಜೆ (Maternity Leave) ಸೌಲಭ್ಯವನ್ನು ಘೋಷಿಸಲಾಗಿದೆ.
ಇದನ್ನೂ ಓದಿ: ಕರ್ನಾಟಕ ಬಜೆಟ್ 2026: ಗೃಹಲಕ್ಷ್ಮೀಯರಿಗೆ ಸಿದ್ದರಾಮಯ್ಯ ಬಂಪರ್ ಕೊಡುಗೆ; 28,608 ಕೋಟಿ ರೂ. ಅನುದಾನ ಘೋಷಣೆ!
ಇತರ ಶೈಕ್ಷಣಿಕ ಕೊಡುಗೆಗಳು:
ಶಾಲಾ ಶಿಕ್ಷಕರ ನೇಮಕ: ಶಾಲಾ ಶಿಕ್ಷಣ ಇಲಾಖೆಯಲ್ಲಿ ಒಟ್ಟು 15,000 ಶಿಕ್ಷಕರನ್ನು ನೇಮಿಸಿಕೊಳ್ಳಲು ಸರ್ಕಾರ ಹಸಿರು ನಿಶಾನೆ ನೀಡಿದೆ.
UVCE ಅಭಿವೃದ್ಧಿ: ಬೆಂಗಳೂರಿನ ಯುವಿಸಿಇ (UVCE) ವಿಶ್ವವಿದ್ಯಾಲಯವನ್ನು ಐಐಟಿ (IIT) ಮಾದರಿಯಲ್ಲಿ ಅಭಿವೃದ್ಧಿಪಡಿಸಲು 500 ಕೋಟಿ ರೂ. ಗಳ ಯೋಜನೆಯನ್ನು ಘೋಷಿಸಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

