Breaking News

ಬೆಚ್ಚಿಬೀಳಿಸುವ ಕ್ರೌರ್ಯ: ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಅಂಗಕ್ಕೆ ಬೆಂಕಿ

ಗುರುಗ್ರಾಮ: ಹರಿಯಾಣದ ಗುರುಗ್ರಾಮದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ಆಕೆಯ ಲಿವ್-ಇನ್ ಸಂಗಾತಿಯೇ ನಡೆಸಿರುವ ಭೀಕರ ಹಲ್ಲೆಯ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆಯು ತ್ರಿಪುರಾ ಮೂಲದವರಾಗಿದ್ದು, ಸದ್ಯ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಆರೋಪಿ ಶಿವಂ, ತನ್ನ ಸಂಗಾತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ವಿಕೃತ ಕೃತ್ಯವನ್ನು ತನ್ನ ಮೊಬೈಲ್‌ನಲ್ಲಿ ವಿಡಿಯೋ ಕೂಡ ಮಾಡಿಕೊಂಡಿದ್ದಾನೆ ಎನ್ನಲಾಗಿದೆ

ಯುವತಿಯ ತಲೆಯನ್ನು ಗೋಡೆಗೆ ಮತ್ತು ಪೀಠೋಪಕರಣಗಳಿಗೆ ಜಜ್ಜಿ, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ತಲೆಗೆ ಹೊಡೆದಿದ್ದಾನೆ. ಅಷ್ಟೇ ಅಲ್ಲದೆ, ಚಾಕುವಿನಿಂದ ಆಕೆಯ ಕಾಲುಗಳಿಗೆ ಇರಿದು, “ಇನ್ನು ಮುಂದೆ ನೀನು ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ. ಮದುವೆಯ ಸುಳ್ಳು ಭರವಸೆ ನೀಡಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ, ಅನುಮಾನದ ಹಿನ್ನೆಲೆಯಲ್ಲಿ ಈ ಕ್ರೂರ ಹಲ್ಲೆ ನಡೆಸಿದ್ದಾನೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ

Advertisement

ಇದನ್ನೂ ಓದಿ: ತಮಿಳುನಾಡಿನಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟ: 74 ಲಕ್ಷ ಮತದಾರರು ಡಿಲೀಟ್

ಫೆಬ್ರವರಿ 16ರಂದು ಹಲ್ಲೆ ನಡೆದ ಬಳಿಕ ಯುವತಿಯನ್ನು ಕೋಣೆಯಲ್ಲಿ ಕೂಡಿ ಹಾಕಲಾಗಿತ್ತು. ಫೆಬ್ರವರಿ 18ರ ರಾತ್ರಿ, ಆರೋಪಿಯ ಫೋನನ್ನೇ ಬಳಸಿ ಯುವತಿ ತನ್ನ ತಾಯಿಗೆ ಕರೆ ಮಾಡಿದ್ದಾಳೆ. ಆರೋಪಿಗೆ ತಿಳಿಯಬಾರದು ಎಂಬ ಕಾರಣಕ್ಕೆ ತಾಯಿಯೊಂದಿಗೆ ಬಂಗಾಳಿ ಭಾಷೆಯಲ್ಲಿ ಮಾತನಾಡಿ ತನ್ನ ಪರಿಸ್ಥಿತಿಯನ್ನು ವಿವರಿಸಿದ್ದಾಳೆ. ತಕ್ಷಣವೇ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿದ್ದಾರೆ. ಗುರುಗ್ರಾಮ ಪೊಲೀಸರು ಆರೋಪಿ ಶಿವಂನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಅಡಿಯಲ್ಲಿ ಈ ಕೆಳಗಿನ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು