ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ 2026ರ ಟಿ20 ವಿಶ್ವಕಪ್ನಿಂದಲೇ ಹೊರಗುಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಭಾರತದ ಅಭ್ಯಾಸ ಪಂದ್ಯದ ವೇಳೆ ಹರ್ಷಿತ್ ಗಾಯಗೊಂಡಿದ್ದರು. ಅಭ್ಯಾಸ ಪಂದ್ಯದ ಸಮಯದಲ್ಲಿ ಹರ್ಷಿತ್ ಕುಂಟುತ್ತಾ ಮೈದಾನದಿಂದ ಹೊರನಡೆದಿದ್ದರು ಮತ್ತು ಅವರು ಕೀಲು ನೋವಿನಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಏಜ್ ಜಸ್ಟ್ ಎ ನಂಬರ್: ಯುವಕರನ್ನೇ ನಾಚಿಸುವಂತೆ ಅದ್ಭುತವಾಗಿ ಡ್ಯಾನ್ಸ್ ಮಾಡಿದ 96ರ ಅಜ್ಜಿ
ಭಾರತದ ಪರ ಹರ್ಷಿತ್ ಒಂದೇ ಓವರ್ನಲ್ಲಿ 16 ರನ್ ಬಿಟ್ಟುಕೊಟ್ಟಿದ್ದರು. ಫೆಬ್ರುವರಿ 7ರಿಂದ ಆರಂಭವಾಗುವ ಪಂದ್ಯಾವಳಿಯಲ್ಲಿ ಭಾರತವು ಮೊದಲ ಪಂದ್ಯದಲ್ಲಿ ಯುಎಸ್ಎ ವಿರುದ್ಧ ಆಡಲಿದೆ.
ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ಹರ್ಷಿತ್ ಬದಲಿಗೆ ಅನುಭವಿ ಮೊಹಮ್ಮದ್ ಸಿರಾಜ್ ಅವರಿಗೆ ಅವಕಾಶ ನೀಡಲಾಗಿದೆ.
ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್: 7353833811, ಇ-ಮೇಲ್- g1newsdpt@gmail.com

