Breaking News

ಶಾಲೆಯಲ್ಲೇ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಮುಖ್ಯ ಶಿಕ್ಷಕಿ ; ವಿಡಿಯೋ ವೈರಲ್!

ಚಿತ್ರಕೂಟ (ಯುಪಿ): ವಿದ್ಯಾರ್ಥಿಗಳಿಗೆ ಜ್ಞಾನದೀಪ ಬೆಳಗಬೇಕಾದ ಶಿಕ್ಷಕರೇ ಮಕ್ಕಳನ್ನು ತಮ್ಮ ವೈಯಕ್ತಿಕ ಸೇವೆಗೆ ಬಳಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮುಖ್ಯೋಪಾಧ್ಯಾಯಿನಿ ಮಧು ರೈ ಶಾಲೆಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಪಾದದ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಮಧು ರೈ ಅವರು ನೆಲದ ಮೇಲೆ ಮಲಗಿರುವುದು ಕಾಣಬಹುದು ಮತ್ತು ಅವರ ಸುತ್ತಲೂ ಇರುವ ಸಣ್ಣ ವಯಸ್ಸಿನ ವಿದ್ಯಾರ್ಥಿನಿಯರು ಅವರ ಕಾಲುಗಳನ್ನು ಒತ್ತುತ್ತಿದ್ದಾರೆ. ಶಾಲಾ ಅವಧಿಯಲ್ಲಿ ಪಾಠ ಮಾಡುವುದನ್ನು ಬಿಟ್ಟು, ವಿದ್ಯಾರ್ಥಿಗಳನ್ನು ಈ ರೀತಿ ದುಡಿಸಿಕೊಳ್ಳುತ್ತಿರುವುದು ಶಿಕ್ಷಣ ಇಲಾಖೆಯ ನಿಯಮಗಳ ಉಲ್ಲಂಘನೆಯಾಗಿದೆ ಎಂದು ನೆಟ್ಟಿಗರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಇದನ್ನೂ ಓದಿ: ನಿಮ್ಮ ವೈಯಕ್ತಿಕ ಸೇಡು ಆ ಮೂಕ ಪ್ರಾಣಿಯ ಮೇಲೆ ಏಕೆ? ನಾಯಿಮರಿಗಳನ್ನು ಗೋಡೆಗೆ ಎಸೆದ ಮಹಿಳೆ

ಇಲ್ಲಿದೆ ನೋಡಿ ವಿಡಿಯೋ:


ವಿಡಿಯೋ ವೈರಲ್ ಬೆನ್ನಲ್ಲೇ ಚಿತ್ರಕೂಟದ ಜಿಲ್ಲಾ ಮೂಲ ಶಿಕ್ಷಣಾಧಿಕಾರಿಗಳು (BSA) ತನಿಖೆಗೆ ಆದೇಶಿಸಿದ್ದು, ಮುಖ್ಯೋಪಾಧ್ಯಾಯಿನಿಯನ್ನು ಅಮಾನತುಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು