Breaking News

ಭಾರೀ ಮಳೆ: ಆ.3ರಂದು ದಕ್ಷಿಣ ಕನ್ನಡ ಜಿಲ್ಲೆಯ‌ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ದರ್ಶನ್ ಅವರು ಆ.3 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಮಂಗಳೂರು, ಉಳ್ಳಾಲ, ಮೂಡಬಿದ್ರೆ, ಬಂಟ್ವಾಳ, ಮುಲ್ಕಿ ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಹೈಸ್ಕೂಲ್ ಗಳಿಗೆ ಹಾಗೂ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ ತಾಲೂಕುಗಳಲ್ಲಿ ಅಂಗನವಾಡಿಯಿಂದ ಪಿಯುಸಿ ವರೆಗೆ ರಜೆ ಘೋಷಿಸಲಾಗಿದೆ.

ಮಳೆಯ ತೀವ್ರತೆ ಹೆಚ್ಚಿರುವ ಕಾರಣ ತಾಸು/ತಗ್ಗು ಪ್ರದೇಶಗಳು ಹಾಗೂ ನದಿ ತೀರಕ್ಕೆ ತೆರಳದಂತೆ ಮತ್ತು ಅಗತ್ಯವಿಲ್ಲದೆ ಹೊರಗಡೆ ಸಂಚರಿಸದಂತೆ ಜಿಲ್ಲಾಡಳಿತವು ಸಾರ್ವಜನಿಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದೆ.

Leave a Reply

Your email address will not be published. Required fields are marked *