ಮಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಲ್ಯಾಂಡಿಂಗ್ ಆಗಲಾಗದೆ ವಿಟ್ಲದಲ್ಲಿ ಸುತ್ತು ಹೊಡೆಯುತ್ತಿರುವ ವಿಮಾನಗಳು!

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಿಂಚು ಮತ್ತು ಗುಡುಗು ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ವೈಪರೀತ್ಯದ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೂ ಉಂಟಾಗಿದ್ದು, ವಿಮಾನಗಳ ಲ್ಯಾಂಡಿಂಗ್‌ಗೆ ಭಾರಿ ಅಡಚಣೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್‌ವೇ ಸ್ಪಷ್ಟವಾಗಿ ಕಾಣಿಸದ ಕಾರಣ (Low Visibility), ವಿವಿಧೆಡೆಯಿಂದ ಬಂದ ಎರಡು ವಿಮಾನಗಳು ಲ್ಯಾಂಡಿಂಗ್ ಆಗಲು ಸಾಧ್ಯವಾಗದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸುತ್ತಮುತ್ತಲಿನ ಆಕಾಶದಲ್ಲಿ ಸುತ್ತು ಹೊಡೆಯುತ್ತಿವೆ. ಭೂಮಿಯಿಂದ ಅತ್ಯಂತ ಸಮೀಪದಲ್ಲಿ ವಿಮಾನಗಳು ಹಾರಾಡುತ್ತಿರುವುದು ಸ್ಥಳೀಯರಲ್ಲಿ ಕುತೂಹಲ ಮತ್ತು ಆತಂಕವನ್ನು ಮೂಡಿಸಿದೆ.

ಇದನ್ನೂ ಓದಿ: ಕರ್ನಾಟಕದ ದೇವಸ್ಥಾನಗಳ ಆದಾಯದಲ್ಲಿ ನವ ದಾಖಲೆ: ಕುಕ್ಕೆಗೆ 167 ಕೋಟಿ ರೂ., ಕೊಲ್ಲೂರಿಗೆ 85 ಕೋಟಿ ರೂ. ಕಾಣಿಕೆ!

ಇಲ್ಲಿದೆ ನೋಡಿ ವಿಡಿಯೋ: 

ನಗರದ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹವಾಮಾನ ಇಲಾಖೆಯು ಮುಂದಿನ ಕೆಲವು ಗಂಟೆಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಹವಾಮಾನ ಸುಧಾರಿಸಿದ ನಂತರವಷ್ಟೇ ವಿಮಾನಗಳ ಲ್ಯಾಂಡಿಂಗ್‌ಗೆ ಅನುಮತಿ ನೀಡಲಾಗುವುದು ಎಂದು ತಿಳಿದುಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು