ಸುಳ್ಯ: ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೂಮಿ ಪೂಜೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಭಾರತೀಯ ಜನತಾ ಪಕ್ಷದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಶಕ್ತಿ ಕೇಂದ್ರದ ಸದಸ್ಯರು, ಶಾಲೆಯ ಸಿಆರ್ಪಿ, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳ ಪೋಷಕರು ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದರು.

ಇದನ್ನೂ ಓದಿ: Puttur: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಅಟಲ್ ಟಿಂಕರಿಂಗ್ ಕಾರ್ಯಾಗಾರ
ಶೌಚಾಲಯ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳು ರಜೆಗೆ ಹೋಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ತಿಳಿಸಲಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

