ನವದೆಹಲಿ: ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಶರ್ಟ್ ಬಿಚ್ಚಿ ಪ್ರಧಾನಿ ಮೋದಿ ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ

ನವದೆಹಲಿ: ದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಮಟ್ಟದ ಗಣ್ಯರು ಭಾಗವಹಿಸಿದ್ದ ಎಐ ಶೃಂಗಸಭೆಯ ಹೊರಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಭಾರಿ ಸದ್ದು ಮಾಡಿದೆ. ಸಭೆಯ ಆವರಣದ ಸಮೀಪ ನುಗ್ಗಿದ ಕಾರ್ಯಕರ್ತರು ತಮ್ಮ ಶರ್ಟ್ ಬಿಚ್ಚಿ, ಅರೆನಗ್ನವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬೆಲೆ ಏರಿಕೆಯ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಭದ್ರತಾ ವ್ಯವಸ್ಥೆಯನ್ನು ಮೀರಿ ಬಂದ ಕೆಲ ಕಾರ್ಯಕರ್ತರು ಸಾರ್ವಜನಿಕವಾಗಿ ಶರ್ಟ್ ಬಿಚ್ಚಿ ಸರ್ಕಾರದ ನೀತಿಗಳನ್ನು ಖಂಡಿಸಿದರು. ವಿಶ್ವದ ವಿವಿಧ ದೇಶಗಳ ತಂತ್ರಜ್ಞಾನ ನಾಯಕರು ಮತ್ತು ಗಣ್ಯರು ಇದ್ದ ಸ್ಥಳದಲ್ಲೇ ಇಂತಹ ಘಟನೆ ನಡೆದಿದ್ದು, ದೆಹಲಿ ಪೊಲೀಸರಲ್ಲಿ ಆತಂಕ ಮೂಡಿಸಿತ್ತು. ಘಟನೆ ಸಂಭವಿಸುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ಸುತ್ತುವರಿದರು. ಬಲವಂತವಾಗಿ ಅವರನ್ನು ಎಳೆದುಕೊಂಡು ಹೋಗಿ ಪೊಲೀಸ್ ವಾಹನಕ್ಕೆ ತುಂಬಲಾಯಿತು. ಸುಮಾರು 10ಕ್ಕೂ ಹೆಚ್ಚು ಕಾರ್ಯಕರ್ತರನ್ನು ಸದ್ಯ ವಶಕ್ಕೆ ಪಡೆಯಲಾಗಿದ್ದು, ಅವರ ವಿರುದ್ಧ ನಿಷೇಧಾಜ್ಞೆ ಉಲ್ಲಂಘನೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತಂದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

Advertisement

ಇದನ್ನೂ ಓದಿ: AI ಶೃಂಗಸಭೆಯಲ್ಲಿ ‘ ನಾಯಿ ರೋಬೋಟ್’ ವಿವಾದ: ಈ ನಾಯಿ ವಿಶೇಷತೆಗಳೇನು? ವಿಶ್ವವಿದ್ಯಾಲಯದ ಹೇಳಿದ್ದೇನು?

ಒಂದೆಡೆ ಸರ್ಕಾರ ಎಐ ಮತ್ತು ತಂತ್ರಜ್ಞಾನದ ಬಗ್ಗೆ ಮಾತನಾಡುತ್ತಿದೆ, ಆದರೆ ಮತ್ತೊಂದೆಡೆ ದೇಶದ ಯುವಜನತೆ ಉದ್ಯೋಗವಿಲ್ಲದೆ ಬೀದಿಗೆ ಬೀಳುತ್ತಿದ್ದಾರೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

Advertisement

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಮ್ಮ ಆಸುಪಾಸಿನಲ್ಲಿ ನಡೆಯುವಂತಹ ಕಾರ್ಯಕ್ರಮ, ಸಭೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಫೋಟೋ ಸಹಿತ G1 News ಗೆ ಮಾಹಿತಿ ಕಳುಹಿಸಿ. ವಾಟ್ಸಪ್:‌ 7353833811, ಇ-ಮೇಲ್-‌ g1newsdpt@gmail.com

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು