ಲಾಕಪ್ ಡೆತ್ ಪ್ರಕರಣ: 9 ಪೊಲೀಸರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ತಮಿಳುನಾಡಿನ ಕೋರ್ಟ್!

ಚೆನ್ನೈ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾಥಂಕುಲಂನ ತಂದೆ-ಮಗನ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ತೀರ್ಪು ಹೊರಬಿದ್ದಿದೆ. ಈ ಪ್ರಕರಣದ ಒಂಬತ್ತು ಪೊಲೀಸ್ ಸಿಬ್ಬಂದಿಗೆ ಮದ್ರಾಸ್ ಹೈಕೋರ್ಟ್ ಪೀಠವು ಮರಣದಂಡನೆ (ಗಲ್ಲು ಶಿಕ್ಷೆ) ವಿಧಿಸಿದೆ.

2020ರ ಕೊರೊನಾ ಲಾಕ್‌ಡೌನ್ ಅವಧಿಯಲ್ಲಿ, ನಿಗದಿತ ಸಮಯಕ್ಕಿಂತ ಹೆಚ್ಚಿನ ಸಮಯ ಅಂಗಡಿ ತೆರೆದಿದ್ದರು ಎಂಬ ಸಣ್ಣ ಕಾರಣಕ್ಕಾಗಿ ವ್ಯಾಪಾರಿ ಪಿ. ಜಯರಾಜ್ (59) ಮತ್ತು ಅವರ ಮಗ ಜೆ. ಬೆನ್ನಿಕ್ಸ್ (31) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಕಸ್ಟಡಿಯಲ್ಲಿದ್ದಾಗ ಪೊಲೀಸರು ಇಬ್ಬರಿಗೂ ರಾತ್ರಿಯಿಡೀ ಅಮಾನವೀಯವಾಗಿ ಚಿತ್ರಹಿಂಸೆ ನೀಡಿದ್ದರು. ತೀವ್ರ ಗಾಯಗೊಂಡಿದ್ದ ತಂದೆ-ಮಗ ಠಾಣೆಯಲ್ಲೇ ಮೃತಪಟ್ಟಿದ್ದರು. ಈ ಘಟನೆ ಪೊಲೀಸರ ದೌರ್ಜನ್ಯದ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು.

Advertisement

ಪ್ರಕರಣದ ತೀವ್ರತೆಯನ್ನು ಗಮನಿಸಿ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ಸಲ್ಲಿಸಿದ 2,427 ಪುಟಗಳ ಚಾರ್ಜ್‌ಶೀಟ್ ಮತ್ತು ಸಾಕ್ಷ್ಯಗಳನ್ನು ಪರಿಗಣಿಸಿದ ನ್ಯಾಯಾಧೀಶ ಜಿ. ಮುತ್ತುಕುಮಾರನ್, ಇದು “ಅತ್ಯಂತ ಕ್ರೂರ ಮತ್ತು ಅಧಿಕಾರ ದುರುಪಯೋಗದ ಅಪರೂಪದ ಪ್ರಕರಣ” ಎಂದು ಬಣ್ಣಿಸಿದ್ದಾರೆ. ಪೊಲೀಸರು ಪೂರ್ವನಿಯೋಜಿತವಾಗಿ ಈ ಕೃತ್ಯ ಎಸಗಿದ್ದಾರೆ ಎಂಬ ವಾದವನ್ನು ನ್ಯಾಯಾಲಯ ಪುರಸ್ಕರಿಸಿದೆ.

ಇದನ್ನೂ ಓದಿ ವಯಸ್ಸೇ ಅಡ್ಡಿಯಲ್ಲ: ಪರೀಕ್ಷೆಯಲ್ಲಿ 100ಕ್ಕೆ 98 ಅಂಕ ಪಡೆದ 96 ವರ್ಷದ ಅಜ್ಜಿ

Advertisement

ಇನ್ಸ್‌ಪೆಕ್ಟರ್ ಎಸ್. ಶ್ರೀಧರ್, ಸಬ್ ಇನ್ಸ್‌ಪೆಕ್ಟರ್‌ಗಳಾದ ಪಿ. ರಘು ಗಣೇಶ್ ಮತ್ತು ಕೆ. ಬಾಲಕೃಷ್ಣನ್ ಸೇರಿದಂತೆ ಒಟ್ಟು 9 ಜನರಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಚಾರಣೆಯ ಹಂತದಲ್ಲೇ ಕೋವಿಡ್‌ನಿಂದ ನಿಧನರಾಗಿದ್ದರು.

ಇನ್ನಷ್ಟೂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Advertisement

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು