ಮಣಿಪಾಲದಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ವಿರುದ್ಧ ದಿಕ್ಕಿನಲ್ಲಿ ಬಂದ ವಾಹನ ಸವಾರ ಪರಾರಿ!

ಉಡುಪಿ: ಮಣಿಪಾಲದ ಈಶ್ವರನಗರದ ಬಳಿ ಗುರುವಾರ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಅತೀ ವೇಗವಾಗಿ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ, ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಬೆಳ್ತಂಗಡಿ ಮೂಲದ ವಿನೀಶ್ ಮತ್ತು ವೀರಪ್ಪ ಎಂಬುವವರು ಈಶ್ವರನಗರದ ರೆಸ್ಟೋರೆಂಟ್‌ನಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದರು. ರಸ್ತೆಯ ಡಿವೈಡರ್ ದಾಟಿ ಹೋಗುತ್ತಿದ್ದಾಗ, ಪೆಟ್ರೋಲ್ ಬಂಕ್ ಕಡೆಯಿಂದ ಅತೀ ವೇಗವಾಗಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ವೀರಪ್ಪ ಅವರಿಗೆ ಬಲವಾಗಿ ಢಿಕ್ಕಿ ಹೊಡೆದಿದೆ.

ಢಿಕ್ಕಿಯ ರಭಸಕ್ಕೆ ವೀರಪ್ಪ ಅವರ ತಲೆ, ಕಾಲು ಮತ್ತು ಸೊಂಟಕ್ಕೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೂಡಲೇ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವೆಸಗಿದ ಚಾಲಕ ಘಟನಾ ಸ್ಥಳದಿಂದ ಕಾರಿನೊಂದಿಗೆ ಪರಾರಿಯಾಗಿದ್ದನು.

Advertisement

ಇದನ್ನೂ ಓದಿ: ಉಡುಪಿ: ಇಬ್ಬರ ವಿರುದ್ಧ ಗಡಿಪಾರು ಆದೇಶ ಹೊರಡಿಸಿದ ಪೊಲೀಸರು

ತನಿಖೆ ಕೈಗೆತ್ತಿಕೊಂಡ ಮಣಿಪಾಲ ಪೊಲೀಸರು ಕಾರನ್ನು ಬೆನ್ನಟ್ಟಿ, ಮಂಚಿ ಕುಮೇರಿ ಎಂಬಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಕಾರು ಶಿವಮೊಗ್ಗ (Shimoga) ಜಿಲ್ಲೆಯಲ್ಲಿ ನೋಂದಣಿಯಾಗಿದ್ದು (KA-14), ಪೊಲೀಸರು ಕಾರಿನ ಮಾಲೀಕ ಮತ್ತು ಚಾಲಕನ ಪತ್ತೆಗಾಗಿ ಬಲೆ ಬೀಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

 

 

Leave a Reply

Your email address will not be published. Required fields are marked *

ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು